ಪುಟ್ಟ ಮಗುವಿನ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸುವ ಮೂಲಕ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮಾನವೀಯತೆ ಮೆರೆದಿದ್ದಾರೆ.
ಪುಟ್ಟ ಮಗು ಚಿರಂಜೀವಿಗೆ ಎರಡು ಕಣ್ಣಿನಲ್ಲೂ ಪೊರೆ ಬೆಳೆದಿತ್ತು. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಮಾತನಾಡಿದ ಧ್ರುವ ಸರ್ಜಾ ಚಿಕಿತ್ಸೆ ಕೊಡಿಸಿ ವೆಚ್ಚವನ್ನು ಭರಿಸುವ ಮೂಲಕ ನೆರವಾಗಿದ್ಧಾರೆ. ಪುಟ್ಟ ಮಗುವಿಗೆ ಯಶಸ್ವಿಗಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಮೂಲಕ ಗಾರೆ ಕೆಲಸ ಮಾಡುವ ತಂದೆಯ ಬೆನ್ನಿಗೆ ನಿಂತಿದ್ದಾರೆ.
ಯುಗಾದಿ ಹಬ್ಬದ ಮಾರನೇ ದಿನ ಸೋಮವಾರ ಸುದೀಪ್) ಸ್ಪೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮ ಕೀರ್ತನಾ ಚಿಕಿತ್ಸೆಗೆ ಸಹಾಯ ಮಾಡಿದ್ದರು. ಇದರ ಚಿಕಿತ್ಸೆಗೆ 16 ಕೋಟಿ ರೂ. ಬೇಕಿರೋದ್ರಿಂದ ಸುದೀಪ್, ನಾನು ನನ್ನ ಕೈಲಾದ ಸಹಾಯ ಮಾಡಿದ್ದೀನಿ, ನೀವೆಲ್ಲರೂ ಕೈಜೋಡಿಸಿ ಎಂದು ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಧ್ರುವ ಸರ್ಜಾ ಕೂಡ ಮತ್ತೊಂದು ಪುಟ್ಟ ಮಗುವಿನ ಬಾಳಿಗೆ ಬೆಳಕಾಗಿರೋದನ್ನು ನೋಡಿ ಅಭಿಮಾನಿಗಳು ಶ್ಲಾಘಿಸಿದ್ದಾರೆ.


