ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ ಆಗಿದ್ದಾರೆ.
ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ನಿಂದ ಮುಕ್ತನಾಗಿದ್ದೇನೆ ಎಂದು ವೀಡಿಯೋ ಸಂದೇಶದಲ್ಲಿ ಸಂತಸ ಹಂಚಿಕೊಂಡಿದ್ದ ಶಿವರಾಜ್ ಕುಮಾರ್, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆಸ್ಪತ್ರೆಯ ಹೊರಗೆ ಕುಟುಂಬದ ಸದಸ್ಯರೊಂದಿಗೆ ತೆಗೆಸಿಕೊಂಡ ಫೋಟೊ ಹಂಚಿಕೊಂಡಿದ್ದಾರೆ.
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದರೂ ಇನ್ನು ಎರಡು ಬಾರಿ ಚೆಕಪ್ ಮುಗಿಸಿಕೊಂಡ ನಂತರ ಶಿವರಾಜ್ ಕುಮಾರ್ ಜನವರಿ ೨೬ರಂದು ಬೆಂಗಳೂರಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ.