Tuesday, February 17, 2026
Google search engine
Homeಕಾನೂನುಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ಅರ್ಜಿ ತಿರಸ್ಕಾರ

ಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ಅರ್ಜಿ ತಿರಸ್ಕಾರ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ತಿರಸ್ಕರಿಸಿದೆ.

ಮಗಳಿಗೆ ಪರೀಕ್ಷೆ ಹಿನ್ನೆಲೆಯಲ್ಲಿ  ಆಕೆಯ ಜೊತೆಗೆ ಇರಬೇಕಿದೆ. ಹೀಗಾಗಿ 20 ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಐ.ಪಿ. ನಾಯಕ್, ಅರ್ಜಿಯನ್ನು ಸೋಮವಾರ ತಿರಸ್ಕರಿಸಿ ಆದೇಶಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ. ಇವರೊಂದಿಗೆ ದರ್ಶನ್, ನಾಗರಾಜ್, ಪ್ರದೂಷ್ ಸೇರಿದಂತೆ ಏಳು ಮಂದಿ ಆರೋಪಿಗಳು ಕಳೆದ ವರ್ಷ ಆಗಸ್ಟ್ 15ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷಾ ಬಂಧಿಯಾಗಿದ್ದಾರೆ.

ತಮ್ಮ ಮಗಳಿಗೆ ಪರೀಕ್ಷೆ ಇರುವುದರಿಂದ 20 ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.

ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿ ಪವಿತ್ರಾ ಗೌಡ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರತಿಕೂಲ ಬೀರುವ ಸಾಧ್ಯತೆಯಿದೆ ಎಂದು ಎಸ್​ಪಿಪಿ ವಾದ ಮಂಡಿಸಿದ್ದರು. ಎರಡು ಕಡೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪವಿತ್ರಾ ಗೌಡ ಅವರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ಆದೇಶಿಸಿದೆ.

ಮನೆ ಊಟಕ್ಕೆ ಹೈಕೋರ್ಟ್​ ತಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ನಗರದ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರತಿವಾದಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚನೆ ನೀಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments