Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ಏಪ್ರಿಲ್ 11- 12: ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್ ಫಿನಾಲೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು

ಬೆಂಗಳೂರು: ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಅಂತಿಮ ಘಟ್ಟ ತಲುಪಿದ್ದು ಫಿನಾಲೆ ಇದೆ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30 ರವರೆಗೆ ಪ್ರಸಾರ ಆಗಲಿದೆ.

ಸೆಲೆಬ್ರಿಟಿ ಸ್ಪರ್ಧಿಗಳು ಮತ್ತು ಡ್ಯಾನ್ಸರ್ ಗಳು ಜೋಡಿಯಾಗಿ ಪರ್ಫಾರ್ಮೆನ್ಸ್ ನೀಡಿದ ಈ ಶೋನಲ್ಲಿ ವಿವಿಧ ಬಗೆಯ ನೃತ್ಯ ಪ್ರಕಾರಗಳು ಮತ್ತು ಥೀಮ್ ಗಳಿದ್ದಿದ್ದು ಮಾತ್ರವಲ್ಲದೆ ಈ ಕಾರ್ಯಕ್ರಮ ಕಳೆದ ಕೆಲವು ವಾರಗಳಿಂದ ಚಾನೆಲ್‌ನ ವೀಕೆಂಡ್ ಕಾರ್ಯಕ್ರಮಗಳಲ್ಲಿ ಪ್ರಮುಖ ಭಾಗವಾಗಿತ್ತು.

ಡಾ. ಶಿವರಾಜ್ ಕುಮಾರ್, ರಚಿತಾ ರಾಮ್, ಅರ್ಜುನ್ ಜನ್ಯ ಮತ್ತು ವಿಜಯ್ ರಾಘವೇಂದ್ರ ಅವ್ರು ಡಾನ್ಸ್ ಕರ್ನಾಟಕ ಡಾನ್ಸ್ ಶೋನ ತೀರ್ಪುಗಾರಾಗಿದ್ದರು. ಇನ್ನು ಈ ಶೋನ ನಿರೂಪಣೆಯನ್ನು ಎಲ್ಲರ ಅಚ್ಚುಮೆಚ್ಚಿನ ಅನುಶ್ರೀ ಮಾಡುತ್ತಿದ್ದಾರೆ. ಈ ಸೀಸನ್ ನಲ್ಲಿ ತೀರ್ಪುಗಾರರು ಸ್ಪರ್ಧಿಗಳ ಪರ್ಫಾಮನ್ಸ್ ನು ಹಾವ, ಭಾವ, ಕಾರ್ಡಿನೇಷನ್, ಓವರ್ ಆಲ್ ಪ್ರೆಸೆಂಟೇಷನ್ ಗಳನ್ನು ನೋಡಿ ತಮ್ಮ ತೀರ್ಪನ್ನು ನೀಡಿರುವುದು ಸ್ಪರ್ಧಿಗಳ ಮತ್ತಷ್ಟು ಇಂಪ್ರೂವ್ಮೆಂಟ್ ಗೆ ಕಾರಣಾವಾಯಿತು.

ಈ ಶೋನಲ್ಲಿ ನೃತ್ಯದ ಮೂಲಕ ಕಥೆ ಹೇಳುವುದಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಇಲ್ಲಿ ಶಾಸ್ತ್ರೀಯ, ಜಾನಪದ ಮತ್ತು ಸಿನಿಮಾ ಶೈಲಿಯ ನೃತ್ಯಗಳನ್ನು ವಿಷಯ ಅಥವಾ ಕಥೆಯ ಆಧಾರದ ಮೇಲೆ ಪ್ರದರ್ಶಿಸಲಾಗಿದ್ದು, ಇದು ವೀಕ್ಷಕರಿಗೆ ಭಾವನಾತ್ಮಕವಾಗಿ ಮತ್ತಷ್ಟು ಹತ್ತಿರವಾಯ್ತು.
ಪೂಜಾ ಮತ್ತು ಅನೂಪ್, ಸಿದ್ದೇಗೌಡ್ರು ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು ಹಾಗೂ ಶಿಕ್ಷಿತ್ ತಾಪಾ ಮತ್ತು ಸಂಜನಾ ಫೈನಲಿಸ್ಟ್ ಗಳಾಗಿದ್ದು ಇವರುಗಳ ನಡುವೆ ಗ್ರಾಂಡ್ ಫಿನಾಲೆಯಲ್ಲಿ ಪೈಪೋಟಿ ನಡೆಯಲಿದೆ.

ವಿಭಿನ್ನ ಶೈಲಿಯ ನೃತ್ಯಗಳನ್ನು ಅದ್ಭುತವಾಗಿ ಪ್ರದರ್ಶಿಸಿದ ಎಲ್ಲಾ ಜೋಡಿಗಳು ಈಗ ಅಂತಿಮ ಸುತ್ತನ್ನು ತಲುಪಿದ್ದಾರೆ. ಫಿನಾಲೆ ಎಪಿಸೋಡ್ ನಲ್ಲಿ ಎಲ್ಲಾ ಜೋಡಿಗಳು ಪರ್ಫಾರ್ಮ್ ಮಾಡಿದ ನಂತರ ಈ ಸೀಸನ್ ನ ವಿಜೇತರು ಯಾರು ಅಂತ ಘೋಷಣೆ ಮಾಡಲಾಗುತ್ತದೆ. ಇನ್ನು ಡಾನ್ಸ್ ಕರ್ನಾಟಕ ಡಾನ್ಸ್ ಈ ಸೀಸನ್ ನ ವಿಜೇತರು ಯಾರಾಗಲಿದ್ದಾರೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಜಾಸ್ತಿ ಆಗಿದೆ.

ಸೀಸನ್ ಈಗ ಅಂತಿಮ ಹಂತಕ್ಕೆ ಬಂದಿದ್ದು ಸ್ಪರ್ಧೆ ಮತ್ತಷ್ಟು ಕಠಿಣಗೊಂಡಿದ್ದೆ. ಫಿನಾಲೆಯಲ್ಲಿ ಪ್ರತಿ ಜೋಡಿಯು ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವುದರಿಂದ ಗೆಲ್ಲುವವರು ಯಾರು ಎಂದು ಹೇಳುವುದು ಕಷ್ಟವಾಗಿದೆ. ಈ ಅಂತಿಮ ಸಂಚಿಕೆಗಳಲ್ಲಿ ವಿಜೇತರು ಯಾರೆಂದು ತಿಳಿಯಲಿದ್ದು, ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.

ಯಾರಾಗಲಿದ್ದಾರೆ ಡಾನ್ಸ್ ಕರ್ನಾಟಕ ಡಾನ್ಸ್ ಈ ಸೀಸನ್ ನ ವಿನ್ನರ್? ತಿಳ್ಕೊಳೋಕೆ ವೀಕ್ಷಿಸಿ ಜೀ ಕನ್ನಡ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30 ರವರೆಗೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment