ಯಶ್ ನಟನೆಯ ಟಾಕ್ಸಿಕ್ ಚಿತ್ರ ತಂಡ ಚಿತ್ರೀಕರಣಕ್ಕಾಗಿ ಮರಗಳನ್ನು ಕಡಿದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೈಕೋರ್ಟ್ ಎಫ್ ಐಆರ್ ಗೆ ತಡೆ ನೀಡಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಟಾಕ್ಸಿಕ್ ಚಿತ್ರದ ವಿರುದ್ಧ ಅರಣ್ಯಾಧಿಕಾರಿ ದಾಖಲಿಸಿದ್ದ ಎಫ್ ಐಆರ್ ಗೆ ತಡೆ ನೀಡಿ ಆದೇಶ ನೀಡಿದೆ.
ಟಾಕ್ಸಿಕ್ ಚಿತ್ರ ನಿರ್ಮಾಣ ಮಾಡುತ್ತಿರುವ ಕೆವಿಎನ್ ಪ್ರೊಡಾಕ್ಷನ್ ಹಾಗೂ ನಿರ್ಮಾಪಕರು ಬೆಂಗಳೂರು ಹೊರವಲಯದಲ್ಲಿ ಚಿತ್ರ ನಿರ್ಮಾಣಕ್ಕಾಗಿ ಸೆಟ್ ನಿರ್ಮಿಸಲು ಭಾರೀ ಪ್ರಮಾಣದಲ್ಲಿ ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಲಾಗಿತ್ತು.
‘ಟಾಕ್ಸಿಕ್’ ಚಿತ್ರತಂಡ ಸೆಟ್ ಹಾಕಿದ ಜಾಗವನ್ನು 1963ರಲ್ಲೇ ರಾಜ್ಯ ಸರ್ಕಾರ ಹೆಚ್ ಎಂಟಿ ಸಂಸ್ಥೆಗೆ ನೀಡಿದೆ. ಆಗ ಒಟ್ಟು 400 ಎಕರೆ ಭೂಮಿಯನ್ನು ಹೆಚ್‌ಎಂಟಿ ಸಂಸ್ಥೆಗೆ ನೀಡಲಾಗಿತ್ತು. ಈ ಜಮೀನಿನ ಪೈಕಿ 18 ಎಕರೆಯನ್ನು ಕೆನರಾ ಬ್ಯಾಂಕ್‌ಗೆ ಹೆಚ್‌ಎಂಟಿ ಸಂಸ್ಥೆಯು ಮಾರಾಟ ಮಾಡಿದೆ. ಕೆನರಾ ಬ್ಯಾಂಕ್‌ನಿಂದ ಲೀಸ್ ಪಡೆದು ‘ಟಾಕ್ಸಿಕ್’ ಸಿನಿಮಾ ತಂಡ ಇಲ್ಲಿ 30 ಕೋಟಿ ರೂ. ಹೂಡಿಕೆ ಮಾಡಿ ಸಿನಿಮಾ ಸೆಟ್ ಹಾಕಲಾಗಿದೆ.
ಸರ್ಕಾರವೇ ಇದು ಅರಣ್ಯ ಭೂಮಿಯಲ್ಲವೆಂದು ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಶೂಟಿಂಗ್ ಸೆಟ್ ನಿರ್ಮಾಣಕ್ಕೆ ಇಲ್ಲಿ ಯಾವುದೇ ಮರಗಳನ್ನು ಕಡಿದಿಲ್ಲ ಎಂದು ‘ಟಾಕ್ಸಿಕ್’ ಚಿತ್ರ ನಿರ್ಮಾಪಕರ ಪರ ವಕೀಲ ಬಿಪಿಎನ್ ಹೆಗ್ಡೆ ವಾದಿಸಿದರು. ಅರ್ಜಿದಾರರ ವಾದ ಆಲಿಸಿದ ಕೋರ್ಟ್ ಇದು ‘ಟಾಕ್ಸಿಕ್’ 1, 2, 3 ತೆಗೆಯೋಕೆ ಶಾಶ್ವತ ಸೆಟ್ ಹಾಕಿದ್ದೀರಾ ಎಂದು ಪ್ರಶ್ನಿಸಿ ಎಫ್‌ಆರ್‌ಗೆ ಕೋರ್ಟ್ ಮಧ್ಯಂತರ ತಡೆ ನೀಡಿತು.