Home ಮನರಂಜನೆ BIGG BOSS ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಕೋರ್ಟ್ ಗೆ ಹಾಜರು!

BIGG BOSS ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಕೋರ್ಟ್ ಗೆ ಹಾಜರು!

ಬಿಗ್ ಬಾಸ್ ಸ್ಪರ್ಧಿಯಾಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮಂಗಳವಾರ ಬೆಂಗಳೂರಿನ ೧ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ.

by Editor
0 comments
chitra kundapura

ಬಿಗ್ ಬಾಸ್ ಸ್ಪರ್ಧಿಯಾಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮಂಗಳವಾರ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ.

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಯಾಗಿರುವ ಚೈತ್ರಾ ಕುಂದಾಪುರ ಕಾರ್ಯಕ್ರಮದ ನಡುವೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಗೋವಿಂದಬಾಬು ಎಂಬುವವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಚೈತ್ರಾ ಕುಂದಾಪುರ ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

ನ್ಯಾಯಾಲಯದ ಆದೇಶದ ಮೇರೆಗೆ ಚೈತ್ರಾ ಕುಂದಾಪುರ ಮಂಗಳವಾರ ಬಿಗ್ ಬಾಸ್ ಕಾರ್ಯಕ್ರಮದ ನಡುವೆ ಕೋರ್ಟ್ ಗೆ ಹಾಜರಾಗಿದ್ದು, ವಿಚಾರಣೆಯನ್ನು ಜನವರಿಗೆ 13ಕ್ಕೆ ಮುಂದೂಡಲಾಗಿದೆ.

banner

ಬಿಗ್ ಬಾಸ್ ಮನೆಯಲ್ಲಿ 60 ದಿನ ಪೂರೈಸಿರುವ ಚೈತ್ರಾ ಕುಂದಾಪುರ ಬೆಂಗಾಲಿನೊಡನೆ ನೀಲಿ ಸೀರೆ ಧರಿಸಿದ್ದು, ಮುಖಕ್ಕೆ ಮಾಸ್ಕ್ ಮತ್ತು ಕಪ್ಪು ಕನ್ನಡಕ ಧರಿಸಿ ನ್ಯಾಯಾಲಯದ ಮುಂದೆ ಹಾಜರಾದರು.

ಬಿಗ್ ಬಾಸ್ ಮನೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಆಗಮಿಸಿದ ಚೈತ್ರಾ ವಿಚಾರಣೆ ಮುಂದೂಡಿಕೆ ಆಗುತ್ತಿದ್ದಂತೆ ಬಿಗ್ ಮನೆಗೆ ಮರಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಈಗಾಗಲೇ ಐಮಾಧ್ಯಮ’ ಟಾಸ್ಕ್ ನಡೆಯುತ್ತಿದ್ದು, ಚೈತ್ರಾ ನಿರೂಪಕಿ ಪಾತ್ರ ನಿಭಾಯಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಅತ್ಯಂತ ಕಿರಿಯ ಚೆಸ್ ಪಟು ಭಾರತ ಗುಕೇಶ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ! ಧಾರ್ಮಿಕ ಸ್ಥಳ ಕಾಯ್ದೆ ವಿಚಾರಣೆ ಮುಗಿಯದೇ ಹೊಸ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್ ಬೆಂಗಳೂರು: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಸುಮ್ಮ ಸುಮ್ಮನೆ ನಾವು ಲಾಟಿ ಚಾರ್ಜ್ ಮಾಡಿಲ್ಲ: ಸಚಿವ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಗರಂ BIG NEWS ಒಂದು ದೇಶ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು! Bealagavi Session: ರಾಜ್ಯದಲ್ಲಿ 11,000 ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್