ಬ್ರಹ್ಮಗಂಟು ಸೇರಿದಂತೆ ಹಲವು ಕನ್ನಡದ ಧಾರವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೈದರಾಬಾದ್‌ನಲ್ಲಿ ತಡರಾತ್ರಿ ಶನಿವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ನಗು ನಗುತ್ತಾ ಇರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡಿಕೊಂಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಹಾಸನ ಮೂಲದ ಶೋಭಿತಾ 2 ವರ್ಷಗಳ ಹಿಂದೆ ಮದುವೆಯಾಗಿ ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಮದುವೆ ನಂತರ ನಟನೆಯಿಂದ ದೂರ ಉಳಿದಿದ್ದ ಶೋಭಿತಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಶೋಭಿತಾ ಖಿನ್ನತೆಯಿಂದ ನರಳುತ್ತಿದ್ದರು ಎಂದು ಹೇಳಲಾಗಿದ್ದು, ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವಂತಹ ದುರ್ಬಲ ಮನಸ್ಥಿತಿಯವಳಲ್ಲ ಎಂದು ಕುಟುಂಬದವರು ಹೇಳಿದ್ದು, ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ಶೋಭಿತಾ ನಟಿಸಿದ್ದರು. ಜನಪ್ರಿಯ ‘ಬ್ರಹ್ಮಗಂಟು’ ಸೀರಿಯಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿ ಕೆಲಸ ಮಾಡಿದ್ದರು.