Home ಮನರಂಜನೆ ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

by Editor
0 comments
jayanti

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಜಯಂತಿ ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.

ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದರು. ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಬಣ್ಣಿಸಿದರು.

banner

ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ ಶೇ. 100ರಷ್ಟು ತೆರಿಗೆ ವಿನಾಯಿತಿ ಘೋಷಿಸಿದ್ದು ನಾನೇ. ಪಿ.ಲಂಕೇಶ್ ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು.

ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್, ಹಿರಿಯ ಪತ್ರಕರ್ತ ಸಮೀವುಲ್ಲಾ, ಜಯಂತಿ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕ ಸದಾಶಿವ ಶೆಣೈ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದಿಲ್ಲಿ ಅಸೆಂಬ್ಲಿ ಚುನಾವಣೆ: ಆಪ್‌ ಗೆ ಇಂಡಿಯಾ ಬಲ ಶೇ.16ರಷ್ಟು ಕುಸಿದ ಉತ್ಪಾದನೆ: ದುಬಾರೆಯಾಗಲಿದೆ ಸಕ್ಕರೆ ದರ! ಮಹಿಳೆಯರ ದೇಹದ ಆಕಾರ ಅಪಹಾಸ್ಯ ಶಿಕ್ಷಾರ್ಹ ಅಪರಾಧ: ಕೋರ್ಟ್ ಮಹತ್ವದ ತೀರ್ಪು ಬೆಂಗಳೂರು-ತುಮಕೂರು-ರಾಮನಗರ ವರ್ತುಲ ರಸ್ತೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಮ್ಮತಿ ಶರಣಾದ 6 ಮಂದಿ‌ ನಕ್ಸಲರ ಸಶಸ್ತ್ರ ಹೋರಾಟದ ಹಿಂದಿನ ನೋವಿನ ಕಥೆ ಏನು ಗೊತ್ತಾ? ಮಂಗಳೂರಿನಲ್ಲಿ ಸಮುದ್ರಪಾಲಾದ ಬೆಂಗಳೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು! ಸಿಎಂ ಸಮ್ಮುಖದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು: 24 ವರ್ಷಗಳಲ್ಲೇ ಇದೇ ಮೊದಲು! ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್! ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ! ಬೆಂಗಳೂರಿನಲ್ಲಿ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳ ಕೊಂದ ಪತಿ!