Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

Pushpa-2 ಬಿಡುಗಡೆಗೂ ಮುನ್ನವೇ ಪುಷ್ಪ-2 ದಾಖಲೆ: ಟಿಕೆಟ್ ಬುಕ್ಕಿಂಗ್ ನಿಂದಲೇ 63 ಕೋಟಿ ಗಳಿಕೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
allu arjun
allu arjun

ಸುಕುಮಾರ್ ನಿರ್ದೇಶಿಸಿ ಅಲ್ಲು ಅರ್ಜುನ್ ನಟಿಸಿರುವ ಬಹು ನಿರೀಕ್ಷಿತ ಪುಷ್ಪ-2 ಚಿತ್ರ ಬಿಡುಗಡೆಗೆ ಮುನ್ನವೇ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ಟಿಕೆಟ್ ಬುಕ್ಕಿಂಗ್ ನಲ್ಲೂ ಆರ್ ಆರ್ ಆರ್ ದಾಖಲೆ ಮುರಿದಿದೆ.

ಪುಷ್ಪ-2 ಚಿತ್ರದ ಟಿಕೆಟ್ ಬುಕ್ಕಿಂಗ್ ಆರಂಭವಾದ ಬೆನ್ನಲ್ಲೇ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೂ 21,42,071  ಟಿಕೆಟ್ ಗಳು ಮಾರಾಟವಾಗಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ನಿಂದಲೇ ಪುಷ್ಪ-2 ಚಿತ್ರ 68.16 ಕೋಟಿ ಗಳಿಸುವ ಮೂಲಕ ಆರ್ ಆರ್ ಆರ್ ದಾಖಲೆ ಮುರಿದಿದೆ.

ಎಸ್.ಎಸ್. ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ನಿಂದ 58.73 ಕೋಟಿ ರೂ. ಸಂಪಾದಿಸುವ ಮೂಲಕ ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯನ್ನು ಪುಷ್ಪ ಮುರಿದಿದೆ.

ಆರ್ ಆರ್ ಆರ್, ಕೆಜಿಎಫ್-2, ಬಾಹುಬಲಿ ಮುಂತಾದ ಚಿತ್ರಗಳು ಬುಕ್ ಮೈ ಶೋನಲ್ಲಿ ಅತ್ಯಂತ ವೇಗವಾಗಿ 12 ಲಕ್ಷ ಟಿಕೆಟ್ ಮುಂಗಡವಾಗಿ ಮಾರಾಟವಾದ ದಾಖಲೆ ಮಾಡಿದ್ದು, ಈ ದಾಖಲೆಯನ್ನು ಪುಷ್ಪ ಮುರಿದು 21 ಲಕ್ಷ ಟಿಕೆಟ್ ಮಾರಾಟದ ದಾಖಲೆ ಬರೆದಿದೆ.

ಬಿಡುಗಡೆಗೆ ಸಿದ್ಧವಾಗಿರುವ ಪುಷ್ಪ ಮೊದಲ ದಿನವೇ 250 ಕೋಟಿ ರೂ. ಗಳಿಸುವ ಮೂಲಕ ಹೊಸ ದಾಖಲೆ ಬರೆಯುವ ಮುನ್ಸೂಚನೆ ನೀಡಿದೆ. ಚಿತ್ರ ತೆಲುಗು, ಹಿಂದಿ, ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗುತ್ತಿದೆ.

ಮೂಲಗಳ ಪ್ರಕಾರ ಮೊದಲ ದಿನ ದೇಶಾದ್ಯಂತ 20 ಲಕ್ಷ ಶೋಗಳು ನಡೆಯಲಿವೆ. ಪುಷ್ಪ-2 ಚಿತ್ರ ಬಿಡುಗಡೆ ಮುನ್ನವೇ 1000 ಕೋಟಿ ರೂ. ಗಳಿಸುವ ಮೂಲಕ ದಾಖಲೆ ಬರೆದಿದೆ. ವಿತರಣಾ ಹಂಚಿಕೆಯಿಂದ 640 ಕೋಟಿ ರೂ. ಡಿಜಿಟಲ್ ಹಕ್ಕು ಮಾರಾಟದಿಂದ 64 ಕೋಟಿ, ಸ್ಯಾಟಲೈಟ್ ಪ್ರಸಾರ ಮಾರಟ ಹಕ್ಕಿನಿಂದ 85 ಕೋಟಿ ರೂ. ಹಾಗೂ ಮ್ಯೂಸಿಕ್ ನಿಂದ 85 ಕೋಟಿ ರೂ. ಗಳಿಸಿದೆ ಎಂದು ಮೂಲಗಳು ತಿಳಿಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment