Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ಕಾಂತಾರ ನಟಿ ಹೆಸರಿನಲ್ಲಿ ಹಣ ಸುಲಿಗೆ: ಕ್ರಮಕ್ಕೆ ಮುಂದಾದ ರುಕ್ಮಿಣಿ ವಸಂತ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
rukmini vasanth

ಸೂಪರ್ ಹಿಟ್ ಕಾಂತಾರಾ ಚಾಪ್ಟರ್ -1 ಚಿತ್ರದ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಸಾಮಾಜಿಕ ಜಾಲತಾಣದಲ್ಲಿ ಖಾತೆ ಮೂಲಕ ಹಣ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಕಾಂತಾರ ಚಾಪ್ಟರ್ -1 ಚಿತ್ರದ ನಟಿ ರುಕ್ಮಿಣಿ ವಸಂತ್ ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ  9445893273 ಸಂಖ್ಯೆಯನ್ನು ಬಳಸಿಕೊಂಡು, ನನ್ನಂತೆ ನಟಿಸಿ, ಸುಳ್ಳು ನೆಪದಲ್ಲಿ ವಿವಿಧ ಜನರನ್ನು ಸಂಪರ್ಕಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಖ್ಯೆ ನನಗೆ ಸೇರಿಲ್ಲ. ಈ ನಂಬರ್​​ನಿಂದ ಬರುವ ಯಾವುದೇ ಮೆಸೇಜ್​​ ಅಥವಾ ಕರೆಗಳು ಸಂಪೂರ್ಣ ಫೇಕ್​ ಎಂಬುದನ್ನು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಅಥವಾ ಅವರೊಂದಿಗೆ ಕನೆಕ್ಟ್​ ಆಗಬೇಡಿ. ಈ ಕೃತ್ಯವು ಸೈಬರ್ ಅಪರಾಧದ ಅಡಿ ಬರುತ್ತದೆ. ಅಂತಹ ವಂಚನೆ ಮತ್ತು ದಾರಿತಪ್ಪಿಸುವ ಕೆಲಸದಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ, ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳಿವಳಿಕೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.

ನಟಿ ತಮ್ಮ ಅಧಿಕೃತ ಇನ್​​ಸ್ಟಾಗ್ರಾಮ್​ ಖಾತೆಯ ಸ್ಟೋರಿ ವಿಭಾಗದಲ್ಲಿ ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ತಮ್ಮ ಹೆಸರಿನಲ್ಲಿ ಹಣ ಸುಲಿಗೆ ಮಾಡಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೊಂಬಾಳೆ ಫಿಲ್ಮ್ ನಿರ್ಮಾಣ ಮಾಡಿರುವ ಮಹತ್ವಾಕಾಂಕ್ಷೆಯ ಯೋಜನೆ ಕಾಂತಾರ ಚಾಪ್ಟರ್​ 1 ನಿರೀಕ್ಷೆಯಂತೆ ಅಭೂತಪೂರ್ವ ಯಶಸ್ಸು ಕಂಡಿದೆ. ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್​ ಕನಕವತಿಯಾಗಿ ಪ್ರಮುಖ ಪಾತ್ರ ವಹಿಸಿದ್ದರು. ಈ ಚಿತ್ರ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದ್ದು, ಸುಮಾರು 900 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿದೆ.

ರುಕ್ಮಿಣಿ ವಸಂತ್ ಯಶ್​ ಜೊತೆ ಟಾಕ್ಸಿಕ್​ ಮತ್ತು ಜೂನಿಯರ್​ ಎನ್​ಟಿಆರ್​ ಮತ್ತು ಪ್ರಶಾಂತ್ ನೀಲ್ ಜೋಡಿಯ ಚಿತ್ರದಲ್ಲಿ ನಟಿಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment