ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕುಟುಂದ ಜೊತೆ ವಾಸವಾಗಿದ್ದ ಸನೋಜ್ ಮಿಶ್ರಾ (45) ಗಾಜಿಯಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದು, ಗುಪ್ತಚರ ಇಲಾಖೆ ಮಾಹಿತಿ ಹಾಗೂ ತಂತ್ರಜ್ಞಾನದ ಬಳಕೆಯಿಂದ ಬಂಧಿಸಲಾಗಿದೆ.
ಸುಮಾರು ನಾಲ್ಕು ವರ್ಷಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು 28 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ತನಿಖೆ ನಡೆಯುತ್ತಿದೆ. ಸಿನಿಮಾದಲ್ಲಿ ನಟಿಯಾಗುವ ಆಸೆ ವ್ಯಕ್ತಪಡಿಸಿದ್ದ ಮಹಿಳೆಯ ಜೊತೆ ನಾಲ್ಕು ವರ್ಷಗಳಿಂದ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಸನೋಜ್ ಮಿಶ್ರಾ ನಂತರ ಸಿನಿಮಾದಲ್ಲೂ ಅವಕಾಶ ಕೊಡದೇ ಮದುವೆ ಆಗದೇ ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಮೂರು ಬಾರಿ ಸನೋಜ್ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ. 2024 ಮಾರ್ಚ್ 6ರಂದು ಪ್ರಕರಣ ದಾಖಲಾಗಿದ್ದು, ಮದುವೆ ಆಗುವುದಾಗಿ ವಂಚನೆ, ದೈಹಿಕ ಹಲ್ಲೆ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


