Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಜಿಲ್ಲಾಧಿಕಾರಿಗೆ ಅರಣ್ಯ ಇಲಾಖೆ ಪತ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 31 ವೀಕ್ಷಣೆಗಳು
abhiman studio

ಬೆಂಗಳೂರು:ಸಾಹಸಿಂಹ ವಿಷ್ಣುವರ್ಧನ್ ಸ್ಮಾರಕ ಧ್ವಂಸಗೊಳಿಸಿ ಭಾರೀ ವಿವಾದ ಸೃಷ್ಟಿಸಿದ್ದ ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಅರಣ್ಯ ಇಲಾಖೆಯು, ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಕಳೆದ ಆ.22ರಂದು ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರವೀಂದ್ರಕುಮಾರ್‌ ಅವರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರಿಗೆ ಪತ್ರ ಬರೆದಿದ್ದು, ನಿಯಮ ಉಲ್ಲಂಘನೆ ಮಾಡಿರುವ ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಿರ್ದೇಶನ ಮಾಡಿದ್ದಾರೆ.

ನಟ ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ 20 ಎಕರೆ ಭೂಮಿಯನ್ನು 20 ವರ್ಷ ಲೀಸ್‌‍ಗೆ ನೀಡಾಗಿತ್ತು. ನಂತರ ಭೋಗ್ಯದ ಅವಧಿ ವಿಸ್ತರಣೆ ಮಾಡಿಕೊಳ್ಳಲಾಗಿತ್ತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಅವರ ಮಕ್ಕಳಾದ ಶ್ರೀನಿವಾಸ್‌‍ ಹಾಗೂ ಗಣೇಶ್‌ ಜಿಲ್ಲಾಧಿಕಾರಿಗಳ ಬಳಿ 10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ.

ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಲಾಗಿದೆ. ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ತಿಳಿಸಿದ್ದರೆಂದು ತಿಳಿದುಬಂದಿದೆ.
ಆದರೆ ಈವರೆಗೆ ಸ್ಟುಡಿಯೋ ಯಥಾಸ್ಥಿತಿಯಲ್ಲೇ ಇದೆ. ಇದರ ಅಭಿವೃದ್ಧಿಯಾಗಿಲ್ಲ. ಈಗ ಬಾಲಕೃಷ್ಣ ಮೊಮಗ ಕಾರ್ತಿಕ್‌ ಈ ಜಮೀನನ್ನು ಮಾರಲು ಪ್ಲ್ಯಾನ್‌ ಮಾಡಿದ್ದರು. 1 ಎಕರೆಗೆ 14 ಕೋಟಿ ರೂಪಾಯಿಯಂತೆ ಮಾರಲು ಪ್ಲ್ಯಾನ್‌ ನಡೆದಿತ್ತು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದೆ. ಹೀಗಾಗಿ, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.

ಇದೇ ಆಗಸ್ಟ್‌ 7ರಂದು ರಾತ್ರೋರಾತ್ರಿ ಅಭಿಮಾನ್‌ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್‌ ಅವರ ಸಮಾಧಿಯನ್ನು ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್‌ ಅವರಿಗೆ ಪತ್ರ ಬರೆಯಲಾಗಿದೆ.

ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್‌ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ.

ಪತ್ರದ ವಿವರ:

ಸರ್ಕಾರಿ ಆದೇಶದ ಅನ್ವಯ ಏಪ್ರಿಲ್‌ 09, 1969 ರಂದು 20 ಎಕರೆ ಪ್ರದೇಶವನ್ನು ಟಿ.ಎನ್‌.ಬಾಲಕೃಷ್ಣ ಅವರಿಗೆ ಅಭಿಮಾನ್‌ ಚಿತ್ರ ಸ್ಟುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್‌ ಸ್ಟಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಲಾಗಿತ್ತು.

ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್‌ ಹಾಗೂ ಮೊಮ್ಮಗ ಕಾರ್ತಿಕ್‌ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್‌ ಸ್ಟುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಇಲ್ಲಿಯೂ ಉದ್ದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ಪತ್ರದಲ್ಲಿ ಉಲೇಖವಾಗಿದೆ.

ಏನಿದು ವಿವಾದ:

2009ರ ಡಿ.30ರಂದು ವಿಷ್ಣುವರ್ಧನ್‌ ನಿಧನರಾಗಿದ್ದರು. ಬಳಿಕ ಅಭಿಮಾನ್‌ ಸ್ಟುಡಿಯೊದಲ್ಲಿ ಅವರ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಆಗ ಅದು ವಿವಾದಿತ ಜಾಗವೆಂಬ ಬಗ್ಗೆ ಯಾರೂ ಆಲೋಚಿಸಿರಲಿಲ್ಲ. ಬಳಿಕ ಆ ಜಾಗದಲ್ಲೇ ಸಾರಕ ನಿರ್ಮಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.ಅಂತ್ಯಸಂಸ್ಕಾರದ ಸ್ಥಳದಲ್ಲೇ ಸಾರಕ ಮಾಡಬೇಕೆಂದು ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳು ಒತ್ತಾಯಿಸಿದ್ದರು ಇದಕ್ಕೆ ಮಣಿದ ರಾಜ್ಯ ಸರಕಾರ 2010-11ರ ಬಜೆಟ್‌ನಲ್ಲಿ 11 ಕೋಟಿ ರೂ. ಅನುದಾನ ಘೋಷಿಸಿತ್ತು. ಆದರೆ, ಅಭಿಮಾನ್‌ ಸ್ಟುಡಿಯೊದ ವಿವಾದಿತ ಜಾಗದಲ್ಲಿ ವಿಷ್ಣು ಸಾರಕ ನಿರ್ಮಾಣಕ್ಕೆ ಹಿರಿಯ ನಟ ಬಾಲಕೃಷ್ಣ ಕುಟುಂಬವು ವಿರೋಧ ವ್ಯಕ್ತಪಡಿಸಿತ್ತು.

ಸರಕಾರ, ಸ್ಟುಡಿಯೊ ಕಾರ್ಯನಿರ್ವಹಣೆ ಸಂಬಂಧ ತನಿಖೆ ನಡೆಸಿತ್ತು. ತನಿಖಾ ತಂಡವು ಸ್ಟುಡಿಯೊದ 10 ಎಕರೆ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಿತ್ತು. ಆದರೆ, ಸರಕಾರವು ಬಾಲಕೃಷ್ಣರ ಮಕ್ಕಳಿಂದ ಭೂಮಿ ಪರಭಾರೆಯ ದಾಖಲೆಗಳು ಹಾಗೂ ದೃಢೀಕರಣ ಪತ್ರವನ್ನು ಮಾಡಿಸಿಕೊಳ್ಳಲಿಲ್ಲ. ನಂತರ ಬಾಲಕೃಷ್ಣರ ಮಕ್ಕಳು, ಸರಕಾರದ ಮುಟ್ಟುಗೋಲು ಆದೇಶದ ವಿರುದ್ಧ 2015ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು.

ನಡೆದಿದ್ದ ಭೂಮಿ ಪೂಜೆ:

ಸರಕಾರ ಸಾರಕಕ್ಕೆ ಪಕ್ಕದಲ್ಲೇ ಮತ್ತೊಂದು ಜಾಗ ಗುರುತಿಸಿತು. ಸಾರಕ ನಿರ್ಮಾಣಕ್ಕೆ ಭೂಮಿ ಪೂಜೆಯೂ ನಡೆದಿತ್ತು.ಆದರೆ ಅದು ಅರಣ್ಯಪ್ರದೇಶವೆಂಬ ಕಾರಣಕ್ಕೆ ಸಾಮಾಜಿಕ ಕಾರ್ಯಕರ್ತರೊಬ್ಬರು ನ್ಯಾಯಾಲಯದಿಂದ ತಡೆಯಾಜ್ಞೆ ತಂದರು. ಅಭಿಮಾನಿಗಳು ಬಾಲಕೃಷ್ಣರ ಕುಟುಂಬದ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ 2023ರಲ್ಲಿ ನ್ಯಾಯಾಲಯ, ಈ ಪ್ರಕರಣದಲ್ಲಿ ಅಭಿಮಾನಿಗಳಿಗೆ ಹಕ್ಕು ಇಲ್ಲಎಂದು ಹೇಳಿ ಬಾಲಕೃಷ್ಣರ ಕುಟುಂಬ ಸದಸ್ಯರು ಹೈಕೋರ್ಟ್‌ ಆದೇಶ ಪಡೆದು ಸಾರಕ ತೆರವುಗೊಳಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment