Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ಸಮಾಜಮುಖಿ ಸಿನಿಮಾಗಳಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕು ಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು.

ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು.

ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮ ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರ ಮಾಧ್ಯಮ‌ ನೆರವಾಗಬೇಕು ಎಂದರು.

ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮ ಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ನೆರವಾಗುತ್ತದೆ ಎಂದರು.

ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದರು.

ಪ್ರಕಾಶ್ ರಾಜ್ ಸಿನಿಮಾಗೆ ಸೀಮಿತವಾಗಿಲ್ಲ

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ದತೆ ಅಭಿನಂದನೀಯ ಎಂದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ವಿಧಾನ‌ ಪರಿಷತ್ ಸದಸ್ಯೆ ನಟಿ ಉಮಾಶ್ರೀ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment