Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
sudeep
sudeep

ಕಿಚ್ಚು ಸುದೀಪ್ ರಾಜ್ಯ ಸರ್ಕಾರ ಪ್ರಕಟಿಸಿದ್ದ 2019ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

ಬುಧವಾರ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪ್ರಕಟಿಸಿತ್ತು.

ಚಲನಚಿತ್ರ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಗುರುವಾರ ಟ್ವೀಟ್ ಮಾಡಿರುವ ಸುದೀಪ್, ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಆದರೆ ನನಗಿಂತ ಉತ್ತಮ ಅಭಿನಯ ನೀಡಿದ ಸಾಕಷ್ಟು ಕಲಾವಿದರು ಇದ್ದಾರೆ. ಹಾಗಾಗಿ ಪ್ರಶಸ್ತಿಯನ್ನು ಸ್ವೀಕರಿಸಲು ಸಿದ್ಧನಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಪ್ರಶಸ್ತಿಗಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಕಲೆಯನ್ನು ನೀವು ಗುರುತಿಸಿರೋದು ನನ್ನ ಕೆಲಸಕ್ಕೆ ಸಿಕ್ಕಿರುವ ತಕ್ಕ ಪ್ರತಿಫಲ. ನನ್ನ ನಿರ್ಧಾರವು ಬೇಸರವುಂಟು ಮಾಡಬಹುದು. ತೀರ್ಪುಗಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಹಾಗೂ ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ನಟ ಟ್ವೀಟ್ ನಲ್ಲಿ ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment