ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅವರನ್ನು ತನಿಖಾ ಸಂಸ್ಥೆ ಬಂಧಿಸಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಮೀಟು ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಸಿದ್ದಿಕಿ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಆದರೆ ಶುಕ್ರವಾರ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾದಾಗ ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ನವೆಂಬರ್ 19ರಂದು ಬಂಧಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಶುಕ್ರವಾರ ಸಿದ್ದಿಕಿ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರ ಪರ ವಕೀಲರು ಜಾಮೀನು ಪಡೆದಿದ್ದರಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನವೇ ಬಿಡುಗಡೆ ಮಾಡಲಾಯಿತು.