ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಮುಂದಿನ ವಾರದಿಂದ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ.
ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪರ ವಕೀಲ ಅನಿಲ್ ಸಿ ನಿಶಾನಿ ಸೋಮವಾರ ಅಧಿಕೃತವಾಗಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದು, ವಿಚಾರಣೆಗೆ ಅರ್ಜಿ ಅಂಗೀಕರಿಸಲಾಗಿದೆ.
ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂನ್ 11 ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಕಳೆದ ಡಿಸೆಂಬರ್ 13ರಂದು ರಾಜ್ಯ ಹೈಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.