Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ಮನರಂಜನೆ

‘ಸರಿಗಮಪ ಟಿಕೆಟ್ ಟು ಫಿನಾಲೆ: 13 ಸ್ಪರ್ಧಿಗಳು, ಒಂದೇ ಸಿಂಹಾಸನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
zee kannada

ಬೆಂಗಳೂರು: ಕನ್ನಡದ ಟಿವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ, ಎಗ್ಸೈಟ್ಮೆಂಟ್ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ.

ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು- ಬಾಳು ಬೆಳಗುಂದಿ, ಭೂಮಿಕಾ, ದ್ಯಾಮೇಶ, ಕಾರ್ತಿಕ್, ಲಹರಿ, ಮನೋಜ್, ಅಮೋಘ ವರ್ಷ, ರಶ್ಮಿ ಡಿ, ಸುಧೀಕ್ಷಾ, ದೀಪಕ್, ಆಗಮ ಶಾಸ್ತ್ರೀ, ಶಿವಾನಿ, ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ನಡೆಯಲಿದೆ. ಇನ್ನು ಡೈರೆಕ್ಟ್ ಆಗಿ ಫಿನಾಲೆಗೆ ಟಿಕೆಟ್ ಪಡೆಯಲಿರುವ ಆ ಒಬ್ಬ ಲಕ್ಕಿ ಸ್ಪರ್ಧಿ ಯಾರು ಎಂದು ಕಾದು ನೋಡಬೇಕಾಗಿದೆ.

ಅಷ್ಟೇ ಅಲ್ಲದೇ, ಈ ವಾರ ನಡೆಯಲಿರುವ ಟಿಕೆಟ್ ಟು ಫಿನಾಲೆ ಎಪಿಸೋಡ್ ಗೆ ಮತ್ತಷ್ಟು ರಂಗು ನೀಡಲು ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್ ಮತ್ತು ನಾಯಕನಟಿ ಅದಿತಿ ಪ್ರಭುದೇವ ಅವರು ಬರ್ತಿದ್ದಾರೆ. ಶರಣ್ ಅವರ ಕಾಮಿಡಿ, ಅದಿತಿ ಪ್ರಭುದೇವ ಅವರ ಚಾರ್ಮ್ ‘ಟಿಕೆಟ್ ಟು ಫಿನಾಲೆ’ ಎಪಿಸೋಡ್ ನ ಕಲರ್ ಫುಲ್ ಮಾಡೋದು ಅಲ್ಲದೇ ಸ್ಪರ್ಧಿಗಳ ಹುಮ್ಮಸ್ಸನ್ನು ಹೆಚ್ಚಿಸಲಿದೆ.

ಕಠಿಣ ಸ್ಪರ್ಧೆಯ ನಡುವೆಯೂ ಯಾರಿಗೆ ಸಿಗಲಿದೆ ‘ಟಿಕೆಟ್ ಟು ಫಿನಾಲೆ’? ತಿಳ್ಕೊಳೋಕೆ ತಪ್ಪದೆ ವೀಕ್ಷಿಸಿ ‘ಸ ರಿ ಗ ಮ ಪ ಟಿಕೆಟ್ ಟು ಫಿನಾಲೆ’ ಎಪಿಸೋಡ್ ಇದೇ ಶನಿವಾರ ಮತ್ತು ಭಾನುವಾರ ಸಂಜೆ 7:30ಕ್ಕೆ.

6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ concept ನಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಅಷ್ಟೇ ಅಲ್ಲದೇ ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್, ಮಾಜಿಕಲ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಜನಪ್ರಿಯ ಆಂಕರ್ ಅನುಶ್ರೀ ಈ ಆವೃತ್ತಿಯ ಅತೀ ದೊಡ್ಡ ಹೈಲೈಟ್.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment