Thursday, December 25, 2025
Google search engine
Homeಕಾನೂನುನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ.

ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯು ಸುಪ್ರೀಂಕೋರ್ಟ್​ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು.

ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ಸುಪ್ರೀಂಕೋರ್ಟ್​ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆಯಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.

ಅದಕ್ಕೂ ಮುನ್ನ ನಟ ದರ್ಶನ್ ಅವರ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಹೈಕೋರ್ಟ್​, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಗೃಹ ಇಲಾಖೆಯ ಅನುಮತಿ ಪಡೆದುಕೊಂಡು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments