ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ.
ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ ವೀಡಿಯೋ ಪೋಸ್ಟ್ ಮಾಡಿರುವ ಶಿವರಾಜ್ ಕುಮಾರ್, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ ಮಾಡಿದ ಪ್ರಾರ್ಥನೆಯಿಂದ ಶಿವರಾಜ್‌ಕುಮಾರ್ ಎಲ್ಲಾ ರಿಪೋರ್ಟ್ ನೆಗೆಟಿವ್ ಬಂತು. ಅವರೀಗ ಕ್ಯಾನ್ಸರ್ ಫ್ರೀ ಅಂತ ವೈದ್ಯರು ಅಧಿಕೃತವಾಗಿ ಹೇಳಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ. ಇದನ್ನೂ ನಾನು ಎಂದಿಗೂ ಮರೆಯೋದಿಲ್ಲ ಎಂದು ಸಂತಸ ಹಂಚಿಕೊಂಡಿದ್ದಾರೆ.
ನಿಮ್ಮೆಲ್ಲರ ಪ್ರೀತಿ, ಆಶೀರ್ವಾದಕ್ಕೆ ನಾನು ಚಿರಋಣಿ
ಹೊಸ ವರ್ಷದ ಹಾರ್ದಿಕ ಶುಭಾಶಯಗಳು! #2025 pic.twitter.com/4oyg2uXfjg— DrShivaRajkumar (@NimmaShivanna) January 1, 2025
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಭಯ ಆಗುತ್ತೆ ಮಾತನಾಡಬೇಕಾದರೆ, ಎಲ್ಲಿ ಎಮೋಷನಲ್ ಆಗಿ ಬಿಡ್ತೀನಿ ಅಂತ. ಇಲ್ಲಿಂದ ಹೋಗುವಾಗ ಎಮೋಷನಲ್ ಆಗಿದ್ದೆ. ಭಯ ಅನ್ನೋದು ಇದ್ದೇ ಇರುತ್ತದೆ. ಆ ಭಯ ಕಮ್ಮಿ ಮಾಡೋಕೆ ಎಂದೇ ಅಭಿಮಾನಿ ದೇವರುಗಳಿದ್ದಾರೆ ಎಂದು ಅವರು ಹೇಳಿದರು.
ವೈದ್ಯರು ನನ್ನ ನೋಡಿಕೊಂಡ ರೀತಿಯಿಂದ ಇನ್ನಷ್ಟು ಧೈರ್ಯ ಬಂತು. ’45’ ಚಿತ್ರದ ಶೂಟಿಂಗ್ ಮಾಡುವಾಗ ಕಿಮೋ ಥೆರಾಪಿಯಲ್ಲಿ ಕೆಲಸ ಮಾಡಿದ್ದೀನಿ. ಕ್ಲೈಮ್ಯಾಕ್ಸ್ ಫೈಟ್ ಎಲ್ಲಾ ಮಾಡಿದ್ದೇನೆ ಎಂದು ಶಿವರಾಜ್ ಕುಮಾರ್ ಹಂಚಿಕೊಂಡರು.
ಅಮೆರಿಕಗೆ ಚಿಕಿತ್ಸೆಗೆ ಹೊರಡುವ ಡೇಟ್ ಹತ್ತಿರ ಬಂದಾಗ ಸ್ವಲ್ಪ ಟೆನ್ಷನ್ ಜಾಸ್ತಿ ಆಯಿತು. ಆದರೆ ಸದಾ ಪತ್ನಿ ಗೀತಾ ಮತ್ತು ಮಗಳು ನಿವಿ ನನ್ನ ಜೊತೆ ಬೆಂಬಲವಾಗಿ ನಿಂತಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗಿದ್ದು, ಶೀಘ್ರದಲ್ಲೇ ಮರಳುವೆ ಎಂದು ಅವರು ಹೇಳಿದ್ದಾರೆ.