Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಜಿಲ್ಲಾ ಸುದ್ದಿ

ನಾಳೆಯಿಂದ ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
mullayanagiri
mullayanagiri

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1 ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹಾಗೂ ಲಾಡ್ಜ್, ರೆಸ್ಟೋರೆಂಟ್ ಹಾಗೂ ಪಬ್ ಗಳ ಮಾಲೀಕರ ಸಭೆ ಕರೆಯಲಾಗಿದ್ದು, ಮದ್ಯ ಮಾರಾಟದ ಬಗ್ಗೆ ನಿಬಂಧನೆಗಳನ್ನು ತಿಳಿಸಲಾಗಿದೆ. ರೇವ್ ಪಾರ್ಟಿ, ಡ್ರಗ್ಸ್ ಪಾರ್ಟಿ ನಡೆದರೆ ಗಮನಕ್ಕೆ ತರುವಂತೆ ಸೂಚಿಸಲಾಗಿದೆ ಎಂದು ಅವರ ಹೇಳಿದರು.

ಪಾರ್ಟಿಗಳ ಮೇಲೆ ಯಾವುದೇ ಸಂಘಟನೆಗಳು ದಾಳಿ ಮಾಡದಂತೆ ಸೂಚಿಸಲಾಗಿದೆ. ಒಂದು ವೇಳೆ ಪಾರ್ಟಿಗಳ ಮೇಲೆ ಅನುಮಾನವಿದ್ದರೆ ಪೊಲೀಸರಗ ಗಮನಕ್ಕೆ ತರಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಪಾರ್ಟಿ ನೆಪದಲ್ಲಿ ರಾತ್ರಿ ವೇಳೆ ಡಿಜೆ ಸೌಂಡ್ ಹಾಕುವಂತಿಲ್ಲ. ಮದ್ಯ ಸೇವಿಸಿ ವಾಹನ ಚಲಾಯಿಸುವಂತಿಲ್ಲ. ಇವರ ಮೇಲೆ ನಿಗಾ ಇಡಲಾಗಿದ್ದು, ಅಂತಹವರ ಮೇಲೆ ದಂಡ ವಿಧಿಸಲು ಪೊಲೀಸರ ಗಸ್ತು ನಿಯೋಜಿಸಲಾಗುವುದು ಎಂದು ಎಸ್ ಪಿ ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment