Wednesday, May 20, 2026
Google search engine
Homeತಾಜಾ ಸುದ್ದಿ7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

ವಾಹನ ಸವಾರರು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸಾರಿಗೆ ಇಲಾಖೆ 7ನೇ ಬಾರಿ ವಿಸ್ತರಿಸಿದೆ.

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಹಲವಾರು ಬಾರಿ ಅವಕಾಶ ನೀಡಿದ್ದರೂ ರಾಜ್ಯದ ಬಹುತೇಕ ವಾಹನ ಸವಾರರು ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಜನವರಿ 31ರವರೆಗೆ ಮತ್ತೊಮ್ಮೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

2019ಕ್ಕೂ ಮೊದಲು ನೋಂದಣಿಯಾದ ವಾಹನಗಳು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ. ಆದರೆ ಇದುವರೆಗೆ ಬಹುತೇಕ ವಾಹನ ಮಾಲೀಕರು ನಂಬರ್ ಪ್ಲೇಟ್ ಬದಲಿಸಿಕೊಳ್ಳದೇ ಇರುವುದು ಸಾರಿಗೆ ಇಲಾಖೆಗೆ ದೊಡ್ಡ ತಲೆನೋವಾಗಿದೆ.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments