ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮದ ಚರ್ಚೆ ನಡೆಯುತ್ತಿರುವ ನಡುವೆ ರಾಜಸ್ಥಾನ್ ನಲ್ಲಿ ಕಳೆದ 5 ವರ್ಷಗಳಲ್ಲಿ ಬೃಹತ್ ಪರೀಕ್ಷಾ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ನಕಲಿ ಡಿಗ್ರಿ ಸರ್ಟಿಫಿಕೇಟ್ ಪಡೆದು 3 ಲಕ್ಷ ಮಂದಿ ಸರ್ಕಾರಿ ಉದ್ಯೋಗ ಗಿಟ್ಟಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ನಕಲಿ ಡಿಗ್ರಿ ಸರ್ಟಿಫಿಕೇಟ್ ಪಡೆದು 3 ಲಕ್ಷ ಮಂದಿ ಸರ್ಕಾರಿ ಉದ್ಯೋಗ ಪಡೆದ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ನಡೆದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಕಳೆದ 5 ವರ್ಷಗಳಲ್ಲಿ ಸರ್ಕಾರಿ ಉದ್ಯೋಗ ಪಡೆದವರ ಪೈಕಿ 3 ಲಕ್ಷ ಉದ್ಯೋಗಿಗಳು ನಕಲಿ ಪದವಿ ಸರ್ಟಿಫಿಕೇಟ್ ಪಡೆದಿದ್ದು, ಇದರಲ್ಲಿ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲೇ 40,409 ನಕಲಿ ಡಿಗ್ರಿ ಸರ್ಟಿಫಿಕೇಟ್ ಗಳು ವಿತರಣೆ ಆಗಿರುವುದು ಬೆಳಕಿಗೆ ಬಂದಿದೆ.
ನಕಲಿ ದಾಖಲೆಪತ್ರಗಳನ್ನು ನೀಡಿ ಸರ್ಕಾರಿ ಉದ್ಯೋಗ ಪಡೆದಿರುವ ಪ್ರಕರಣಗಳು ಒಂದರ ಹಿಂದೆ ಒಂದು ಬೆಳಕಿಗೆ ಬರುತ್ತಿದ್ದಂತೆ ರಾಜಸ್ಥಾನ್ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತನಿಖೆಗೆ ಆದೇಶಿಸಿದ್ದಾರೆ.
ಕಳೆದ 5 ವರ್ಷಗಳಲ್ಲಿ ನೇಮಕಾತಿ ನಡೆದ ಪ್ರತಿಯೊಂದು ಇಲಾಖೆಯಲ್ಲೂ ಪ್ರತ್ಯೇಕ ತನಿಖೆಗೆ ಆದೇಶಿಸಲಾಗಿದ್ದು, ನೇಮಕಾತಿ ಪರೀಕ್ಷೆಯಲ್ಲಿ ಒಬ್ಬನೇ ಅಭ್ಯರ್ಥಿ ಎಲ್ಲಾ ಪರೀಕ್ಷೆ ಬರೆದಿದ್ದಾನೆಯೇ ಅಥವಾ ಅಭ್ಯರ್ಥಿಯೇ ಪರೀಕ್ಷೆಗೆ ಹಾಜರಾಗಿದ್ದಾನೆಯೇ ಎಂಬುದನ್ನು ತನಿಖೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಪಿಟಿಐ ನೇಮಕಾತಿ ಪರೀಕ್ಷೆಯನ್ನು ನಡೆಸುವ ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿಯು ಪರೀಕ್ಷೆಯಲ್ಲಿ ಪಾಸಾದ 80ಕ್ಕೂ ಹೆಚ್ಚು ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ವೇಳೆ ಎಲ್ಲರ ಡಿಗ್ರಿ ಪ್ರಮಾಣಪತ್ರಗಳು ನಕಲಿ ಎಂಬುದು ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ನಡೆಯುತ್ತಿರುವ ನಕಲಿ ಪ್ರಮಾಣಪತ್ರದ ದಂಧೆ ಬೆಳಕಿಗೆ ಬಂದಿದೆ.
ನಕಲಿ 80 ಪ್ರಮಾಣಪತ್ರಗಳ ಪೈಕಿ 60 ಪ್ರಮಾಣಪತ್ರಗಳು ಚುರುನಲ್ಲಿರುವ ಓಂ ಪ್ರಕಾಶ್ ಜೋಗೆಂದರ್ ಸಿಂಗ್ ವಿಶ್ವವಿದ್ಯಾಲಯಕ್ಕೆ ಸೇರಿದ್ದಾಗಿದೆ.
ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ನಡೆಸಿ ನಕಲಿ ಮತ್ತು ಪರೀಕ್ಷೆ ನಡೆಯದ ದಿನಾಂಕದಲ್ಲಿ ಪ್ರಮಾಣ ಪತ್ರಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ವಿಶೇಷ ಅಂದರೆ 40 ಸಾವಿರಕ್ಕೂ ಅಧಿಕ ನಕಲಿ ಡಿಗ್ರಿ ಸರ್ಟಿಫಿಕೇಟ್ ನೀಡಿರುವ ವಿಶ್ವವಿದ್ಯಾಲಯದಲ್ಲಿ ಕೇವಲ 7 ಮಂದಿ ಸಿಬ್ಬಂದಿ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ವಿಶ್ವವಿದ್ಯಾನಿಲಯವು ಇದುವರೆಗೆ 43,000 ನಕಲಿ ಪದವಿಗಳನ್ನು ವಿತರಿಸಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ದಕ್ಷಿಣ ರಾಜ್ಯಗಳ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇಂತಹ ನಕಲಿ ಪದವಿಗಳನ್ನು ಪಡೆದಿದ್ದಾರೆ.