Thursday, May 14, 2026
Google search engine
Homeದೇಶಹೈದರಾಬಾದ್ ನಲ್ಲಿ ಕಲಬುರಗಿಯ ಒಂದೇ ಕುಟುಂಬದ 5 ಮಂದಿಯ ಶವ ಪತ್ತೆ!

ಹೈದರಾಬಾದ್ ನಲ್ಲಿ ಕಲಬುರಗಿಯ ಒಂದೇ ಕುಟುಂಬದ 5 ಮಂದಿಯ ಶವ ಪತ್ತೆ!

ಕಲಬುರಗಿಯ ಒಂದೇ ಕುಟುಂಬದ 5 ಮಂದಿಯ ಮೃತದೇಹ ಅನುಮಾನಸ್ಪದ ರೀತಿಯಲ್ಲಿ ಹೈದರಾಬಾದ್​ನ ಮಿಯಾಪುರ್ ನಗರದಲ್ಲಿ ಪತ್ತೆಯಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಕರ್ನಾಟಕದ ಕಲಬುರಗಿ ಜಿಲ್ಲೆಯ ಸೇಡಂ ಮಂಡಲದ ರಂಜೋಲಿಯ ಲಕ್ಷ್ಮಯ್ಯ (60), ವೆಂಕಟಮ್ಮ (55), ಅನಿಲ್ (32), ಕವಿತಾ (24) ಮತ್ತು 2 ವರ್ಷದ ಮಗು ಮೃತಪಟ್ಟವರು.

ಒಂದೇ ಮನೆಯಲ್ಲಿ ಎಲ್ಲರ ಶವಗಳು ಪತ್ತೆಯಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಅನುಮಾನ ಉಂಟಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರಿಗೆ ಸಂಬಂಧಿಸಿದ ಮನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಸಾವಿಗೆ ಏನು ಕಾರಣ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಎಲ್ಲಾ ಕೋನಗಳಿಂದ ತನಿಖೆ ನಡೆಯುತ್ತಿದೆ ಎಂದು ಮಿಯಾಪುರ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಪ್ರದೇಶದ ಸಂಬಂಧಿಕರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಮೃತರ ಕುಟುಂಬದ ಹಿನ್ನೆಲೆ ಮತ್ತು ಅವರಿಗೆ ಏನಾದರೂ ಸಮಸ್ಯೆಗಳಿವೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments