Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಪ್ರತಿಭಟನೆಗೆ ಬಂದಿದ್ದ ರೈತ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು
farmer death

ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ  ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್ (50) ಮೃತಪಟ್ಟಿದ್ದಾರೆ.

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಈಶ್ವರ್ ಬಂದಿದ್ದರು.

ರೈಲಿನ ಮೂಲಕ ಬಂದಿಳಿದಿದ್ದ ಈಶ್ವರ್ ಪ್ರತಿಭಟನೆಗೆ ತೆರಳುವಾಗ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಕುಸಿದುಬಿದ್ದಿದ್ದಾರೆ.

ಕೂಡಲೇ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ರಕ್ತದೊತ್ತಡ ಮತ್ತು ಮಧುಮೇಹ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ. ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ವರದಿಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment