Monday, October 12, 2026
Google search engine
Homeರಾಜ್ಯಕೇಂದ್ರದ ಜೊತೆ ರೈತರ ಮಾತುಕತೆ ವಿಫಲ: ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಕೇಂದ್ರದ ಜೊತೆ ರೈತರ ಮಾತುಕತೆ ವಿಫಲ: ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಕೇಂದ್ರ ಸರ್ಕಾರದೊಂದಿಗೆ ನವದೆಹಲಿಯಲ್ಲಿ ಸೋಮವಾರ ನಡೆದ ರೈತರ ನಿಯೋಗದ ಸಭೆ ಯಾವುದೇ ಫಲಪ್ರದವಾಗದ ಹಿನ್ನೆಲೆಯಲ್ಲಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಮಂಗಳವಾರದಿಂದ ಅನಿರ್ದಿಷ್ಟಾವಧಿ ಕಾಲ ಬಂದ್ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಎಚ್ಚರಿಸಿದ್ದಾರೆ.

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಮತ್ತು ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಇಥನಾಲ್ ಅನ್ನು ಕೇಂದ್ರ ಸರ್ಕಾರವೇ ಖರೀದಿಸಬೇಕು ಎಂದು ಆಗ್ರಹಿಸಿ ಕಳೆದ ಸೆಪ್ಟೆಂಬರ್ 29ರಂದು ಲಕ್ಷಾಂತರ ರೈತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನೆ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಸಂದರ್ಭದಲ್ಲಿ, ಸ್ಥಳೀಯ ಶಾಸಕರಾದ ಮಹೇಶ ಟೆಂಗಿನಕಾಯಿ ಹಾಗೂ ಎಂ.ಆರ್. ಪಾಟೀಲ ಮಧ್ಯಸ್ಥಿಕೆ ವಹಿಸಿದ್ದರು. ಅಕ್ಟೋಬರ್ 12, 2026ರಂದು ದೆಹಲಿಗೆ ರೈತ ನಿಯೋಗ ಬರುವುದಾಗಿ ನೀಡಿದ ಭರವಸೆಯ ಮೇರೆಗೆ ಅಂದು ಪ್ರತಿಭಟನೆಯನ್ನು ಹಿಂಪಡೆಯಲಾಗಿತ್ತು.

ಅದರಂತೆ ಸೋಮವಾರ ಬೆಳಗಾವಿಯಿಂದ ರೈತ ಮುಖಂಡರ ನಿಯೋಗ ವಿಮಾನದ ಮೂಲಕ ದೆಹಲಿಗೆ ತೆರಳಿ ಮಾತುಕತೆ ನಡೆಸಿತಾದರೂ, ಕೇಂದ್ರ ಸರ್ಕಾರದ ಕಡೆಯಿಂದ ಸಮಾಧಾನಕರ ಸ್ಪಂದನೆ ಸಿಗಲಿಲ್ಲ. ಮಾತುಕತೆ ಸಂಪೂರ್ಣ ವಿಫಲವಾಗಿರುವ ಕಾರಣ, ಮಂಗಳವಾರದಿಂದ ಯಾವುದೇ ಪರಿಸ್ಥಿತಿಯಲ್ಲೂ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಉಗ್ರ ಪ್ರತಿಭಟನೆ ನಡೆಸಲು ರಾಜ್ಯದ 50 ಲಕ್ಷಕ್ಕೂ ಅಧಿಕ ರೈತರು ಸಜ್ಜಾಗಿದ್ದಾರೆ ಎಂದು ಪೂಜೇರಿ ಸ್ಪಷ್ಟಪಡಿಸಿದರು.

ರಸ್ತೆ ತಡೆಯ ಪ್ರಮುಖ ಸ್ಥಳಗಳು:

ಸದ್ಯದ ಭೀಕರ ಬರಗಾಲದಿಂದಾಗಿ ಕಬ್ಬಿನ ಬೆಳೆ ಒಣಗಿಹೋಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಖಂಡಿಸಿ, ಬೆಳಗಾವಿ ಜಿಲ್ಲೆಯ ಬಾಗೇವಾಡಿ ಹಾಗೂ ಕೊಗನೋಳಿ ಟೋಲ್ ನಾಕೆಗಳು ಸೇರಿದಂತೆ ರಾಜ್ಯಾದ್ಯಂತ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಪಕ್ಷಾತೀತವಾಗಿ ಹತ್ತು-ಹದಿನೈದು ಕಡೆಗಳಲ್ಲಿ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಪ್ರಮುಖರಾದ ಪ್ರೇಮ ಚೌಗಲಾ ಮತ್ತು ರವಿಂದ್ರ ಕುಂಬೋಜೆ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments