Thursday, May 14, 2026
Google search engine
Homeರಾಜ್ಯತುಮಕೂರಿನಲ್ಲಿ ಭೀಕರ ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ 7 ವರ್ಷದ ಬಾಲಕ ಸೇರಿ ನಾಲ್ವರು ಭಕ್ತರು ಸಾವು

ತುಮಕೂರಿನಲ್ಲಿ ಭೀಕರ ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ 7 ವರ್ಷದ ಬಾಲಕ ಸೇರಿ ನಾಲ್ವರು ಭಕ್ತರು ಸಾವು

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು ಮರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತ ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಯಲಬುರ್ಗಾ ನಿವಾಸಿಗಳಾದ ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಜಾರಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ ಪಡೆದಿದ್ದ ಮಾಲಾಧಾರಿಗಳು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ತೆರಳಿದ್ದರು. ಮಧ್ಯಾಹ್ನ ಪಳನಿಯಿಂದ ಬೆಂಗಳೂರು ತುಮಕೂರು ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟಿರುವ ಸಾಕ್ಷಿ ನನ್ನ ಮಗಳು. ಶಬರಿಮಲೆಗೆ ತೆರಳಿದ್ದೆವು. ದೇವರ ದರ್ಶನ ಮಾಡಿಕೊಂಡು ಮರಳುವಾಗ ಮಗಳು ನನ್ನ ಪಕ್ಕದಲ್ಲೇ ಮಲಗಿದ್ದಳು. ಅಪಘಾತ ಹೇಗಾಯಿತು ಎಂದು ಗೊತ್ತಿಲ್ಲ. ಕಾರು ಚಾಲಕ ಸೇರಿ ನಾವು 11 ಜನ ಪ್ರಯಾಣ ಮಾಡುತಿದ್ದೆವು. ನನ್ನ ಮಗಳು ಒಂದನೇ ತರಗತಿ ಓದುತಿದ್ದಳು. ಎರಡನೇ ಬಾರಿ ಶಬರಿ ಮಾಲೆಗೆ ಕರೆದೊಯ್ದಿದ್ದೆ. ಒಳ್ಳೆಯದಾಗಲಿ ಎಂದು ದೇವರ ದರ್ಶನ ಮಾಡಿ ವಾಪಾಸ್ ಬರುವಾಗ ಹೀಗಾಗಿದೆ ಎಂದು ತಂದೆ ಉಲಗಪ್ಪ ಕಣ್ಣೀರು ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments