ಗರ್ಭಿಣಿ ಸೊಸೆಯ ಕತ್ತು ಸೀಳಿ ಮಾವ ಕೊಲೆಗೈದ ಭೀಕರ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಸೊಸೆ ರೇಖಾ (25) ಕೊಲೆಯಾದ ದುರ್ದೈವಿ. ಮಾವ ಸಿದ್ದಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗರ್ಭಿಣಿಯಾಗಿದ್ದ ಕಾರಣ ರೇಖಾ ತವರು ಮನೆಗೆ ತೆರಳಿದ್ದಳು. ಬೀಗರ ಮನೆಗೆ ಬಂದಿದ್ದ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ.
ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಬಂದು ನರಳಾಡಿ ರೇಖಾ ಮೃತಪಟ್ಟಿದ್ದಾರೆ. ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಾವ ಸಿದ್ದಪ್ಪನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



