Monday, June 29, 2026
Google search engine
Homeದೇಶಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ.

ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಕೊಂಡಿದ್ದಾರೆ.

ಸಂಚಾರ ವ್ಯವಸ್ಥೆಯಲ್ಲೂ ಏರುಪೇರಾಗಿದ್ದರಿಂದ ಸಮಸ್ಯೆ ಅನುಭವಿಸುವಂತಾಗಿದೆ. ಇನ್ನು ಮುನ್ನೆಚ್ಚರಿಕೆ ದೃಷ್ಟಿಯಿಂದ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ.

ಶಬರಿಮಲೆ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಅಳುತಕ್ಕಡವುನಿಂದ ಪಂಪಾವರೆಗಿನ ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಚಾರಣ ನಿಷೇಧಿಸಲಾಗಿದೆ.

ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದ್ದು, ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ.

ಪಂಪಾ ಸ್ನಾನ ನಿಷೇಧ

ತೀವ್ರ ಮಳೆಯಿಂದಾಗಿ ಪಂಪಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಯಾತ್ರಿಕರು ನದಿಗೆ ಇಳಿಯುವುದನ್ನು ಹಾಗೂ ಸ್ನಾನಘಟ್ಟಕ್ಕೆ ತೆರಳುವುದನ್ನು ಜಿಲ್ಲಾಧಿಕಾರಿ ಎಸ್.ಪ್ರೇಮ್ ಕೃಷ್ಣನ್ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.

ಶಬರಿಮಲೆ ಪರಿಸರದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿದೆ. ತಕ್ಷಣದ ಯಾವುದೇ ಅಪಾಯ ಇಲ್ಲವಾಗಿದ್ದರೂ, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಅಪಾಯ ಸಾಧ್ಯತೆಗಳನ್ನು ಪರಿಗಣಿಸಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಎರುಮೇಲಿಯಲ್ಲಿ ಮಣ್ಣು ಕುಸಿದು ಬಿದ್ದಿದ್ದ ಪ್ರದೇಶವನ್ನು ತೆರವುಗೊಳಿಸಲಾಗಿದ್ದು, ಮತ್ತೆ ಸಂಚಾರ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಲ್ಲಿ ವ್ಯಾಪಕ ಹಾನಿ: ಈ ಮಧ್ಯೆ ಫೆಂಗಲ್ ಚಂಡಮಾರುತ್ ರೌದ್ರಕ್ಕೆ ತಮಿಳುನಾಡು ತತ್ತರಿಸಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ ವಿಲ್ಲುಪುರಂ ಜಿಲ್ಲೆಯಲ್ಲಿ ಕನಿಷ್ಟ ಏಳು ಮಂದಿ ಮಳೆ, ಭೂಕುಸಿತಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.

ಚಂಡಮಾರುತದ ಕಾರಣ ನೆರೆಯ ಪುದುಚೆರಿಯಲ್ಲಿ ಒಂದೇ ದಿನ ೫೦೦ಮಿಮಿಯಷ್ಟು ದಾಖಲೆಯ ಮಳೆ ಸುರಿದು ಕೇಂದ್ರಾಡಳಿತ ಪ್ರದಶವು ದೊಡ್ಡ ಕೆರೆಯಂತಾಗಿದ್ದು, ಪರಿಹಾರ ಕಾರು ತ್ವರಿತಗತಿಯಲ್ಲಿ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments