ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಅಪಾರ್ಟ್ ಮೆಂಟ್ ನಲ್ಲಿ ಪ್ರಚಾರ ಸಭೆ ನಡೆಸಿದ ವೇಳೆ ಡಿಕೆ ಶಿವಕುಮಾರ್ ತಮ್ಮನಿಗೆ ಮತ ಚಲಾಯಿಸಿದರೆ ಕಾವೇರಿ ನೀರು ಪೂರೈಸಲು ವ್ಯವಸ್ಥೆ ಮಾಡುವ ಹೇಳಿಕೆ ವಿವಾದ ಸೃಷ್ಟಿಸಿತ್ತು.
ಮತದಾರರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದ್ದು, ಕಾಂಗ್ರೆಸ್ ಪರ ಮತ ಚಲಾಯಿಸಿದರೆ ಮಾತ್ರ ಕಾವೇರಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ ವೀಡಿಯೋ ವೈರಲ್ ಆಗಿತ್ತು. ಅಲ್ಲದೇ ಈ ಸಂಬಂಧ ಕೇಂದ್ರ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಆಗಿತ್ತು.