Thursday, July 9, 2026
Google search engine
Homeಅಪರಾಧಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ವಿರುದ್ದ ಎಫ್‌ಐಆ‌ರ್ ದಾಖಲು

ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ವಿರುದ್ದ ಎಫ್‌ಐಆ‌ರ್ ದಾಖಲು

ಬೆಂಗಳೂರು:ಮಹಿಳೆಯರು ಮತ್ತು ಧರ್ಮಕ್ಕೆ ಧಕ್ಕೆ ತರುವಂತಹ ಪದಗಳನ್ನು ಬಳಸಿರುವ ಬಿಗ್ ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ದ ಶಂಕರಪುರಂ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಕರ್ನಾಟಕ ಗೋವು ರಕ್ಷಕರ ಸೇನೆ ಸಂಸ್ಥಾಪಕ ಅಧ್ಯಕ್ಷ ಸುಮನ್ ಕುಮಾ‌ರ್  ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇವಿ ಲಕ್ಷ್ಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಧಾರ್ಮಿಕ
ಭಾವನೆಗಳನ್ನ ಉದ್ದೇಶಪೂರ್ವಕ ವಾಗಿ ಅವಮಾನಿಸಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಆರ್ಯವರ್ಧನ್ ವಿರುದ್ದ ದೂರು ನೀಡಿದ್ದಾರೆ.

ಆರ್ಯವರ್ಧನ್ ಗುರೂಜಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ ಮತ್ತು ಧರ್ಮಕ್ಕೆ ಧಕ್ಕೆ ತರುವಂತಹ ಅಸಭ್ಯ ಶಬ್ದಗಳನ್ನು ಉಪಯೋಗಿಸಿ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಆರ್ಯವರ್ಧನ್ ಗುರೂಜಿ ಮಾತನಾಡಿರುವ ವಿಡಿಯೋ ಪಡೆದು ಪರಿಶೀಲಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments