Wednesday, June 17, 2026
Google search engine
Homeರಾಜಕೀಯವಿಧಾನಪರಿಷತ್ ಗೆ ಮತದಾನ: ಕೈಗೆ ಪಂಚ ಗ್ಯಾರಂಟಿ, ಜೆಡಿಎಸ್ ಗೆ ಒಂದೇ ಗುರಿ!

ವಿಧಾನಪರಿಷತ್ ಗೆ ಮತದಾನ: ಕೈಗೆ ಪಂಚ ಗ್ಯಾರಂಟಿ, ಜೆಡಿಎಸ್ ಗೆ ಒಂದೇ ಗುರಿ!

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ತೆರವಾಗಿರುವ 7 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದ್ದು, ಹೆಚ್ಚುವರಿ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

ವಿಧಾನಪರಿಷತ್ ಚುನಾವಣೆಗೆ ವಿಧಾನಸಭೆಯ ಸಮಿತಿ ಸಭೆ ಕೊಠಡಿಯಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎರಡು ಮತದಾನ ಪೆಟ್ಟಿಗೆಗಳನ್ನು ಇಡಲಾಗಿದೆ.

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಮಿತಿ ಸಭೆಯ ಒಳಗೆ ಹಾಗೂ ಹೊರಗೆ ಸಿಸಿಟಿವಿ ಅಳವಡಿಸಲಾಗಿದೆ. ಶಾಸಕರ ಗೌಪ್ಯ ಮತದಾನಕ್ಕೆ ಎರಡು ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಸುಗಮ ಮತದಾನಕ್ಕೆ ಅಗತ್ಯ ತಯಾರಿಗಳನ್ನ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹೆಚ್ಚುವರಿ ಸ್ಥಾನಕ್ಕಾಗಿ ಪೈಪೋಟಿ

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 4 ಅಭ್ಯರ್ಥಿಗಳನ್ನು ಗೆಲ್ಲುವ ಅವಕಾಶವಿದ್ದರೂ ಹೆಚ್ಚುವರಿಯಾಗಿ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಮತ್ತೊಂದೆಡೆ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳು ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲಿದೆ. ಆದರೆ ಕಣಕ್ಕಿಳಿಸಿರುವ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್ ಪರದಾಡುವಂತಾಗಿದೆ.

ಬಿಡದಿ ರೆಸಾರ್ಟ್ ನಲ್ಲಿ ಎರಡು ದಿನಗಳಿಂದ ತಂಗಿರುವ ಕಾಂಗ್ರೆಸ್ ಶಾಸಕರು ಗುರುವಾರ ಬೆಳಿಗ್ಗೆ ನೇರವಾಗಿ ವಿಧಾನಸಭೆಗೆ ಆಗಮಿಸಲಿದ್ದಾರೆ. ಎರಡು ದಿನಗಳಲ್ಲಿ ಮತದಾನದ ಪ್ರಕ್ರಿಯೆ ಕುರಿತು ಶಾಸಕರಿಗೆ ಸ್ಪಷ್ಟ ಮಾಹಿತಿ ನೀಡಲಾಗಿದ್ದು, ಯಾವುದೇ ಕಾರಣಕ್ಕೂ ಮತಗಳು ಚದುರದಂತೆ ಎಚ್ಚರಿಕೆ ವಹಿಸಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈ ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪರಿಷತ್ ಮತದಾನದ ಅಣಕು ಪ್ರಕ್ರಿಯೆ ನಡೆಸಲಾಯಿತು. ಮತ ಅಸಿಂಧುವಾಗದಂತೆ ಯಾವ ರೀತಿ ಮತ ಚಲಾಯಿಸಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಯಿತು.

ಓರ್ವ ಅಭ್ಯರ್ಥಿ ಗೆಲುವಿಗೆ 28 ಮತಗಳು ಅಗತ್ಯವಿದೆ. ಕಣಕ್ಕೆ ಇಳಿದಿರುವ 5 ಕೈ ಅಭ್ಯರ್ಥಿಗಳಿಗೆ 140 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿ ಇರುವುದು 135 ಮಾತ್ರ. ಬಿಜೆಪಿಯಿಂದ ಉಚ್ಚಾಟಿತಗೊಂಡಿರುವ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಪಕ್ಷೇತರ ಶಾಸಕ ಇಬ್ಬರು ಹಾಗೂ ಸರ್ವೋದಯ ಪಕ್ಷದ ಶಾಸಕರು ಕಾಂಗ್ರೆಸ್​ಗೆ ಬೆಂಬಲಿಸಿದರೆ 140 ಮತಗಳು ಆಗಲಿವೆ. ಒಂದು ಮತವು ಅಸಿಂಧುವಾಗದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಶಾಸಕರಿಗೆ ಮತದಾನದ ತರಬೇತಿ ನೀಡಲಾಗುತ್ತಿದೆ.

62 ಶಾಸಕರ ಬಲ ಹೊಂದಿರುವ ಬಿಜೆಪಿಯಿಂದ ಕಣದಲ್ಲಿರುವ 2 ಅಭ್ಯರ್ಥಿಗಳಿಗೆ ತಲಾ 28ರಂತೆ 56 ಮತಗಳು ಅಗತ್ಯವಿದೆ. ಹೀಗಾಗಿ 6 ಮತಗಳು ಹೆಚ್ಚುವರಿಯಾಗಿ ಉಳಿಯಲಿವೆ. ಆದರೆ, ಓರ್ವ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿರುವ ಜೆಡಿಎಸ್​​ ಬಳಿ ಇರೋದು ಕೇವಲ 18 ಶಾಸಕರು. ಹೀಗಿದ್ದರೂ ಬಿಜೆಪಿಯ 6 ಹೆಚ್ಚುವರಿ ಮತ, ಜನಾರ್ದನ ರೆಡ್ಡಿ, ಬಸನಗೌಡ ಪಾಟೀಲ್​​ ಯತ್ನಾಳ್ ಬೆಂಬಲ ಸೇರಿದರೆ ಒಟ್ಟು 26 ಮತಗಳ ಗಡಿ ತಲುಪಲಿದೆ. ಆದರೆ, ಗೆಲುವಿಗೆ 28 ಮತಗಳು ಬೇಕಿರುವ ಹಿನ್ನೆಲೆ 2 ಮತಗಳ ಕೊರತೆ ಜೆಡಿಎಸ್​​ಗೆ ಆಗಲಿದೆ.

ಕಣದಲ್ಲಿರುವ ಅಭ್ಯರ್ಥಿಗಳು ಯಾರು?

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ಎಸ್.ಶಿವಣ್ಣ, ಪಿ.ವಿ.ಮೋಹನ್ ಐದನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್ ಸ್ಪರ್ಧೆಯಲ್ಲಿದ್ದಾರೆ.

ಬಿಜೆಪಿಯಿಂದ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ರಘು ಕೌಟಿಲ್ಯ, ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜು ಕಣದಲ್ಲಿದ್ದಾರೆ.

ಒಟ್ಟು ಶಾಸಕರ ಬಲಾಬಲಾ – 222

ಕಾಂಗ್ರೆಸ್ – 135

ಬಿಜೆಪಿ – 62

ಜೆಡಿಎಸ್ – 18

ಪಕ್ಷೇತರರು – 2

ಸರ್ವೋದಯ ಪಕ್ಷ – 1

ಬಿಜೆಪಿ ಉಚ್ಚಾಟಿತರು – 3

ಒಬ್ಬ ಆಭ್ಯರ್ಥಿಯ ಗೆಲುವಿಗೆ ಬೇಕಿರುವ ಮತಗಳು 28

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments