Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಚಾಮರಾಜನಗರ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ.

ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ ಈ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಬೀಟ್ ಹಾಕುವುದು, ಯಾರಾದರೂ ಕಾಡುಗಳ್ಳರು ಸಂಚರಿಸಿದ್ದಾರೆ, ಬೇಟೆ ನಡೆಸಿದ್ದಾರಾ ಎಂದು ಪತ್ತೆ ಹಚ್ಚುವುದರ ಜೊತೆ ಪ್ರಾಣಿಗಳ ಓಡಾಟದ ಮೇಲು ಕಣ್ಣಿಟ್ಟಿರ ಬೇಕು.

ಬೀಟ್​​ಗೆ ಹೋಗುವ ಹಾಗೆ ತನ್ನ ಕ್ಯಾಂಪ್​ನ 4 ಮಂದಿ ಜೊತೆ ಶನಿವಾರ ಮಧ್ಯಾಹ್ನ ಸಣ್ಣಹೈದ ಬೀಟ್ ಗೆ ಹೋಗಿದ್ದರು. ಹುಲ್ಲು ಬೀಜಗಳನ್ನ ಆಯುವ ಕೆಲಸ ಮಾಡ್ತಾಯಿದ್ರು. ಈ ವೇಳೆ ಹಠಾತ್ತನೆ ಹುಲಿ ಸಣ್ಣ ಹೈದನ ಮೇಲೆ ದಾಳಿ ನಡೆಸಿದೆ ತಕ್ಷಣವೇ ಅಲರ್ಟ್ ಅದ ಜೊತೆಗಿದ್ದ ಸಿಬ್ಬಂದಿ ಕೂಗಿಕೊಂಡು ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ ಸಣ್ಣ ಹೈದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಒಟ್ಟಿನಲ್ಲಿ ಹುಲಿ ದಾಳಿಗಳು ಗಡಿ ನಾಡು ಚಾಮರಾಜನಗರದಲ್ಲಿ ಮುಂದುವರೆದಿದ್ದು, ಜನ ಅಷ್ಟೇ ಅಲ್ಲ ಅರಣ್ಯ ಸಿಬ್ಬಂದಿ ಕೂಡ ಆತಂಕ ಪಡುವಂತಾಗಿದೆ.

ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ ಹನೂರು ತಾಲೂಕುಗಳಲ್ಲಿಯೂ ವ್ಯಾಘ್ರನ ಉಪಟಳ ಮಿತಿಮೀರಿದೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ವ್ಯಾಘ್ರವೊಂದು ಮೈಸೂರು ಕೇಜ್​ನಲ್ಲಿ ಲಾಕ್ ಆಗಿತ್ತು.

ಇನ್ನೊಂದೆಡೆ ಚಾಮರಾಜನಗರ ತಾಲೂಕಿನ ನಂಜೆದೇವನಪುರದಲ್ಲಿ 5 ಹುಲಿಗಳು ಜಮೀನಿನಲ್ಲಿ ಓಡಾಟ ನಡೆಸಿ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಅದೆಷ್ಟೂ ತಡಕಾಡಿದರು ಒಂದು ವ್ಯಾಘ್ರ ಸಹ ಇನ್ನು ಸೆರೆ ಹಿಡಿಯುವುದಕ್ಕೆ ಆಗುತ್ತಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಮತ್ತೆ ಗಡಿ ನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವುದು ಆತಂಕ ಹೆಚ್ಚಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment