ಪೋಸ್ಕೊ ಕಾಯ್ದೆ ಪ್ರಕಾರ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ರಕ್ಷಣೆ (ಪೋಸ್ಕೊ) ಕಾಯ್ದೆ ಅನ್ವಯ ಬೆಂಗಳೂರಿನ ಪೊಲೀಸರು ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಯಡಿಯೂರಪ್ಪ, ಅರುಣ್ ರುದ್ರೇಶ್ ಮತ್ತು ಮರಿಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.
ರುದ್ರೇಶ್ ರಾಮನಗರದ ಬಿಜೆಪಿ ಮುಖಂಡನಾಗಿದ್ದು, ಕರ್ನಾಟಕ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮರಿಸ್ವಾಮಿ ಬಿಜೆಪಿ ಮುಖಂಡ ಹಾಗೂ ಯಡಿಯೂರಪ್ಪ ಅವರ ಸಂಬಂಧಿ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಅರುಣ್ ಯಡಿಯೂರಪ್ಪ ಅವರ ಪರ್ಸನಲ್ ಸೆಕ್ರೆಟರಿ ಆಗಿದ್ದಾರೆ.
ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 81 ವರ್ಷದ ಯಡಿಯೂರಪ್ಪ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದರು.