ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾ ಬಳಿ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಹತ್ಯೆ ಮಾಡಲಾಗಿದೆ.
ಕನಕಪುರ ತಾಲೂಕಿನ ಅಚ್ಚಲು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಂಜೇಶ್ ನಾಲ್ಕು ದಿನಗಳ ಹಿಂದೆ ಸಾತನೂರು ಗ್ರಾಮದಲ್ಲಿ ಸೈಟ್ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು. ಈ ಹಿನ್ನೆಲೆ ಶ್ರೀನಿವಾಸ್ ಎಂಬಾತ ವೈಯಕ್ತಿಕ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಕೂಡಲೇ ಗಾಯಳುವನ್ನು ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಜು.27) ಬೆಳಿಗ್ಗೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



