Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 38 ವೀಕ್ಷಣೆಗಳು
hd devegowda
hd devegowda

ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ದೂರಿದ್ದಾರೆ.

ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು; ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಆಮೆಗತಿಯಲ್ಲಿ ಸಾಗಿರುವ ಎತ್ತಿನಹೊಳೆ ಯೋಜನೆ ವಿಚಾರವನ್ನು ಕಟುವಾಗಿ ಪ್ರಸ್ತಾಪಿಸಿದರು.

ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಪ್ರಧಾನಿಗಳು; ಬಿಜೆಪಿ ಸರಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್‌ ಶೆಟ್ಟರ್‌ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು, ಆಗ ಆ ಯೋಜನೆಯ ಅಂದಾಜು ವೆಚ್ಚ ೮,೦೦೦ ಕೋಟಿ ರೂಪಾಯಿ. ಈಗ ಅದು ೩೩,೦೦೦ ಕೋಟಿ ಮೀರಿದೆ. ಈವರೆಗೂ ಒಂದು ಹನಿ ನೀರು ಕೂಡ ಹರಿದಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ತೊಟ್ಟು ನೀರು ಹೋಗಿಲ್ಲ. ಅಷ್ಟೇ ಅಲ್ಲದೆ, ಆ ಯೋಜನೆ ಕಾರ್ಯಕಗತ ಆಗುತ್ತಿರುವ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಅರಸೀಕರೆಗೇ ನೀರು ಬಂದಿಲ್ಲ. ಈ ಬಗ್ಗೆ ನಾನು ಸಂಪುಟಗಟ್ಟಲೆ ಮಾಹಿತಿ ಇಟ್ಟುಕೊಂಡು ಮಾತನಾಡಬಲ್ಲೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಾನು ನೀರಾವರಿ ಸಚಿವನಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಈ ಬಗ್ಗೆ ಪೂರ್ಣ ಮಾಹಿತಿ, ಅನುಭವ ಇದೆ. ಮೇಕೆದಾಟು ಯೋಜನೆಗೂ ರಾಜ್ಯ ಸರಕಾರವೇ ಅಡ್ಡಿಯಾಗಿದೆ. ಈ ಯೋಜನೆ ಕಾರ್ಯಗತವಾಗುವ ಪ್ರಸ್ತಾವಿತ ಜಾಗ ನನಗೆ ಗೊತ್ತು. ಒಂದು ಕಡೆ ಆನೆ ಕಾರಿಡಾರ್‌, ಮತ್ತೊಂಡೆ ಅರಣ್ಯ ಮತ್ತು ನವ್ಯಜೀವಿ ಸಂಪತ್ತು ಇದೆ. ಪ್ರತಿದಿನವೂ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದಿಂದ ಅಮಾಯಕರು ಬಲಿ ಆಗುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಸರಕಾರಕ್ಕೆ ಆಗಿಲ್ಲ ಎಂದು ಮಾಜಿ ಪ್ರಧಾನಿಗಳು ಆರೋಪಿಸಿದರು.

ಪ್ರತೀ ದಿನವೂ ಈ ಸಂಘರ್ಷ ನಡೆಯುತ್ತಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತರೀಕೆರೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆನೆಗಳು ಬೆಳೆಗಳನ್ನು ನಾಶ ಮಾಡುತ್ತಿವೆ ಹಾಗೂ ತೋಟಗಳಲ್ಲಿ ದುಡಿಮೆ ಮಾಡುವ ರೈತರನ್ನು ಕೊಲ್ಲುತ್ತಿವೆ. ಇದನ್ನು ತಪ್ಪಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿಲ್ಲ ಎಂದು ಅವರು ದೂರಿದರು.

ಯಾವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಬೇಕು ಎಂದು ರಾಜ್ಯ ಸರಕಾರ ಎತ್ತಿಹೊಳೆ ಯೋಜನೆ ಮೂಲಕ ರೂಪಿಸಿತ್ತೋ, ಈಗ ಆ ಯೋಜನೆ ಕಾರ್ಯಗತವಾಗದೇ ಅದೇ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೆ ಮಲೀನ ನೀರನ್ನು ಹರಿಸುತ್ತಿದೆ. ಆ ನೀರು ಮಾನವ ಬಳಕೆ ಯೋಗ್ಯವಲ್ಲದ್ದು. ಇದರ ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಅವು ಸೇವನೆಗೆ ಯೋಗ್ಯವಲ್ಲದ್ದಾಗಿವೆ. ಜನರ ಜೀವದ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂಬುದನ್ನು ಮಾಜಿ ಪ್ರಧಾನಚಿಗಳು ಸದನಕ್ಕೆ ಮನವರಿಕೆ ಮಾಡಿಕೊಟ್ಟರು.

ಈ ಎರಡೂ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇದ್ರ ಮೋದಿ ಅವರು ಹಾಗೂ ಕೇಂದ್ರದ ಅರಣ್ಯ, ಪರಿಸರ ಜೀವಿಶಾಸ್ತ್ರ ಖಾತೆ ಮಂತ್ರಿಗಳಾದ ಭೂಪೇಂದ್ರ ಯಾದವ್‌ ಅವರು ಕೂಡಲೇ ಮಧ್ಯಪ್ರವೇಶಿಸಿ ಸರಿಮಾಡಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment