ಮಾಜಿ ಒಲಿಂಪಿಯನ್ ಕುಸ್ತಿಪಟು ವಿನೇಶ್ ಪೊಗಟ್ ಭರ್ಜರಿ ಗೆಲುವಿನೊಂದಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಹರಿಯಾಣದ ಜುಲಾನಾ ವಿಧಾನಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿದ್ದ ವಿನೇಶ್ ಪೊಗಟ್ 5761 ಸಾವಿರಕ್ಕೂ ಅಧಿಕ ಮತಗಳಿಂದ ಪ್ರತಿಸ್ಪರ್ಧಿ ಬಿಜೆಪಿಯ ಯೋಗೇಶ್ ಕುಮಾರ್ ವಿರುದ್ಧ ಗೆಲುವು ದಾಖಲಿಸಿದ್ದಾರೆ.
ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಆರಂಭದಲ್ಲಿ ಮುನ್ನಡೆ ಪಡೆದಿದ್ದ ವಿನೇಶ್ ಪೊಗಟ್ ನಂತರ ಹಿನ್ನಡೆ ಅನುಭವಿಸಿದ್ದರು. ನಂತರ 14 ಸುತ್ತುಗಳ ಮತ ಎಣಿಕೆ ನಂತರ ಮತ್ತೆ 5 ಸಾವಿರ ಮತಗಳ ಮುನ್ನಡೆಯೊಂದಿಗೆ ಗೆಲುವಿನತ್ತ ಹೆಜ್ಜೆ ಹಾಕಿದರು.
ಕುಸ್ತಿ ಸಂಸ್ಥೆಯಲ್ಲಿ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದ್ದ ವಿನೇಶ್ ಪೊಗಟ್ ನಂತರ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ 150 ಗ್ರಾಂ ತೂಕ ಹೆಚ್ಚಾಗಿದೆ ಎಂಬ ಕಾರಣಕ್ಕೆ ಅನರ್ಹಗೊಂಡು ಪದಕ ವಂಚಿತರಾಗಿದ್ದರು.
ಒಲಿಂಪಿಕ್ಸ್ ನಲ್ಲಿ ಪದಕ ಕೈ ತಪ್ಪಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿನೇಶ್ ಪೊಗಟ್ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಮೂಲಕ ರಾಜಕೀಯ ಪ್ರವೇಶಿಸಿದ ಮೊದಲ ಪ್ರಯತ್ನದಲ್ಲೇ ರೋಚಕ ಗೆಲುವು ಸಾಧಿಸಿದ್ದಾರೆ.