ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಯಾಸಿರ್ (45), ಪತ್ನಿ ಮರಿಯಮ್ಮ (40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ.
ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಈ ಘಟನೆ ನಡೆದಿದ್ದರಿಂದ ರಕ್ಷಿಸಲು ಸಾಧ್ಯವಾಗಲಿಲ್ಲ.
ಮುಂಗಾರು ಮಳೆಗೆ ರಾಜ್ಯದಲ್ಲಿ ಇದು ಮೊದಲ ಬಲಿ ಪ್ರಕರಣಬವಾಗಿದೆ. ಹವಾಮಾನ ಇಲಾಖೆ ಇನ್ನು 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಉಲ್ಲಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.