ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ `ಗೃಹ ಆರೋಗ್ಯ’ ಮುಂದಿನ ತಿಂಗಳಿಂದ ಜಾರಿಗೆ ಬರಲಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ.
ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿ ಮಾಡಿದ್ದು, ಈ ಕಾಯಿಲೆ ಹೊಂದಿದವರಿಗೆ ಮನೆ ಬಾಗಿಲಿನಲ್ಲಿಯೇ ಉಚಿತ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.
ಯಾರಿಗೆಲ್ಲ ಮನೆಯಲ್ಲೇ ಚಿಕಿತ್ಸೆ?
ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಮುಂದಿನ ತಿಂಗಳು ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ.
‘ಗೃಹ ಆರೋಗ್ಯ’ ಯೋಜನೆ ಜಾರಿಗೆಂದೇ ಮೊಬೈಲ್ ಯೂನಿಟ್, ಪ್ರತ್ಯೇಕ ಸಿಬ್ಬಂದಿ, ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯ ಇರುವಂತೆ ನೋಡಿಕೊಳ್ಳಯವ ಉದ್ದೇಶದಿಂದ ಈ ಯೋಜನೆಗೆ ಜಾರಿಗೆ ಇಲಾಖೆ ಮುಂದಾಗಿದೆ.