ಬೆಂಗಳೂರು: ರಾಜ್ಯ ಸರ್ಕಾರವು ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಕೆಗೆ ಅಸ್ತು ಎಂದಿದೆ. ಈ ಮೂಲಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶಿಸಿ, ಸಿಹಿಸುದ್ದಿಯನ್ನು ನೀಡಿದೆ.
ಹೌದು ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.
ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳೊಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪತ್ರಕರ್ತರಿಗೆ ಪ್ರಯಾಣಿಸಲು ಉಚಿತ ಬಸ್ ಬಾಸ್ ವಿತರಣೆಗೆ ಆದೇಶಿಸಿದ್ದಾರೆ.