Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ರಾಜ್ಯ

ಗಾಂಧೀಜಿ ಹೇಳಿದ್ದು ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
siddaramiah

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದ ಜೊತೆ ಅವರು ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ.  ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.

ಪಂಚಾಯತಿಗಳಿಗೆ ಮಹಾತ್ಮಾ ಗಾಂಧೀಜಿ ಹೆಸರು

ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ

ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘’ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ’ ಎಂದು ಉತ್ತರಿಸಿದ್ದರು.  ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.

ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು

ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟು ಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment