9ನೇ ತರಗತಿ ವಿದ್ಯಾರ್ಥಿನಿ ಮೇಲೆ 5 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮಜಬತ್ ನಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ಮನೆವರೆಗೂ ಡ್ರಾಪ್ ಮಾಡುವುದಾಗಿ ಹೇಳಿ ಬೈಕ್ ಮೇಲೆ ಕೂರಿಸಿಕೊಂಡ ಯುವಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ಧಾರೆ.
ಅತ್ಯಾಚಾರ ಆರೋಪಿಯ ಮನೆಗೆ ಸ್ಥಳೀಯರು ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರಿಂದ ಪ್ಯಾರಾ ಮಿಲಿಟರ್ ಪಡೆಯನ್ನು ಹಾಕಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.