Monday, June 29, 2026
Google search engine
Homeಮನರಂಜನೆಗೀತಾ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಚಿಕಿತ್ಸೆ ಮುಂದುವರಿಕೆ

ಗೀತಾ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಚಿಕಿತ್ಸೆ ಮುಂದುವರಿಕೆ

ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಕುತ್ತಿಗೆ ಬಳಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಇತ್ತೀಚೆಗಷ್ಟೇ ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರಿಗೂ ಕುತ್ತಿಗೆ ಬಳಿ ನರದಲ್ಲಿ ಸಮಸ್ಯೆ ಕಂಡು ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.

ಗೀತಾ ಶಿವರಾಜ್​ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಶಿವರಾಜ್ ಕುಮಾರ್ ಅವರ ಚಿಕಿತ್ಸೆ ಮುಂದುವರಿದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಆಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲಿ ಮಾತನಾಡಿದ್ದ ಗೀತಾ ಅವರ ಸಹೋದರ ಹಾಗೂ ಸಚಿವ ಮಧು ಬಂಗಾರಪ್ಪ, ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವ ಮಾಹಿತಿ ನೀಡಿದ್ದರು. ಆದರೆ, ಸರ್ಜರಿಯ ಕಾರಣ ಏನು ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ಅವರ ಆಪ್ತ ಮೂಲಗಳಿಂದ ಸರ್ಜರಿ ಹಿಂದಿನ ಕಾರಣ ರಿವೀಲ್ ಆಗಿದೆ.

ಶಿವರಾಜ್​ಕುಮಾರ್​ಗೆ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಾಗಿನಿಂದ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುವವರೆಗೆ ಗೀತಾ ಅವರು ಬೆಂಬಲವಾಗಿ ನಿಂತಿದ್ದರು. ಪ್ರತಿ ಹಂತದಲ್ಲೂ ಪತಿಗೆ ಧೈರ್ಯ ತುಂಬುತ್ತಾ ಬಂದರು. ಇದರಿಂದ ಶಿವರಾಜ್​ಕುಮಾರ್ ಅವರು ಬೇಗ ಚೇತರಿಕೆ ಕಾಣಲು ಸಾಧ್ಯವಾಯಿತು. ಈಗ ಪತ್ನಿಗೆ ಶಸ್ತ್ರಚಿಕಿತ್ಸೆ ಆದಾಗ ಶಿವರಾಜ್​ಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments