Saturday, May 16, 2026
Google search engine
Homeರಾಜ್ಯಟಿವಿ ನೋಡಬೇಡ ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಟಿವಿ ನೋಡಬೇಡ ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಟಿವಿ ನೋಡುವುದು ಕಡಿಮೆ ಮಾಡು ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಬಸರಿಕಟ್ಟೆ ಗ್ರಾಮದಲ್ಲಿ 7ನೇ ತಗಗತಿ ವಿದ್ಯಾರ್ಥಿನಿ ಸುಪ್ರಿತಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಊಟ ಮಾಡುತ್ತಿದ್ದ ಸುಪ್ರಿತಾ, ಟಿವಿ ನೋಡುತ್ತಾ ತಟ್ಟೆ ಬೀಳಿಸಿ ಅನ್ನವನ್ನು ಚೆಲ್ಲಿದ್ದಾಳೆ. ಅದಕ್ಕೆ ಹೇಳೋದು ಟೀವಿ ನೋಡುವುದು ಕಡಿಮೆ ಮಾಡು ಅಂತ ಬುದ್ದಿವಾದ ಹೇಳಿದ್ದಾರೆ.

ಕೆಲಸಕ್ಕೆ ಮರಳುವ ಮುನ್ನ ಕೆಳಗೆ ಬಿದ್ದಿರುವ ಅನ್ನ ಕ್ಲೀನ್‌ ಮಾಡು ಎಂದು ಬುದ್ದಿವಾದ ಹೇಳಿದ್ದಾರೆ. ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಸುಪ್ರಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ಬಾಲಕಿ ತಾಯಿ ಸರೋಜ ಗಂಡನಿಂದ ಬೇರೆಯಾಗಿ ಬೇರೆ ವಾಸವಿದ್ದಳು. ಹಿರಿಯ ಮಗಳು ತಾಯಿ ಜೊತೆ ಇದ್ದರೆ, ಕಿರಿಯ ಮಗಳು ತಂದೆ ಜೊತೆ ಇದ್ದಳು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments