Thursday, November 21, 2024
Google search engine
Homeತಾಜಾ ಸುದ್ದಿವಾಹನ ಸವಾರರಿಗೆ ಸಿಹಿಸುದ್ದಿ: HSRP ನಂಬರ್ ಪ್ಲೇಟ್ ನ.30ರವರೆಗೆ ಗಡುವು ವಿಸ್ತರಣೆ!

ವಾಹನ ಸವಾರರಿಗೆ ಸಿಹಿಸುದ್ದಿ: HSRP ನಂಬರ್ ಪ್ಲೇಟ್ ನ.30ರವರೆಗೆ ಗಡುವು ವಿಸ್ತರಣೆ!

ಎಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ರಾಜ್ಯ ಸರಕಾರ ವಿಧಿಸಿದ್ದ ಗಡುವು 5ನೇ ಹಾಗೂ ಕೊನೆಯ ಬಾರಿಗೆ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರು ಸ್ವಲ್ಪಮಟ್ಟಿಗೆ ನಿಟ್ಟುಸಿರುಬಿಡುಂತಾಗಿದೆ.

ರಾಜ್ಯ ‌ಸರ್ಕಾರ 4 ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ವಾಹ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಬಾರಿ ಗಡುವು ವಿಸ್ತರಿಸುವ ಮೂಲಕ ಕೊನೆಯ ಅವಕಾಶ ನೀಡಿದೆ.

ನವೆಂಬರ್ 30ರವರೆಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ವಿಸ್ತರಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್ 1ರಿಂದ ನಂಬರ್ ಪ್ಲೇಟ್ ಅಳವಡಿಸದೇ ಇದ್ದರೆ ದಂಡ ವಿಧಿಸುವುದಾಗಿ ತಿಳಿಸಿದೆ.

ರಾಜ್ಯದಲ್ಲಿ 1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ.

ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.

ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.

ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು. ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments