Monday, June 15, 2026
Google search engine
Homeಕ್ರೀಡೆಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!

ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಲಭಿಸಿದೆ.

ರಾಜ್ಯದ ಪೊಲೀಸರು ನೀಡಿದ್ದ 16 ಬದಲಾವಣೆಗಳನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಾಡಿಕೊಂಡಿತ್ತು. ಅಲ್ಲದೇ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ 350ಕ್ಕೂ ಅಧಿಕ ಎಐ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಇದರ 4.5 ಕೋಟಿ ರೂ. ವೆಚ್ಚವನ್ನು ಆರ್ ಸಿಬಿ ಭರಿಸಿತ್ತು.

ರಾಜ್ಯದ ಪೊಲೀಸರು ನೀಡಿದ್ದ 16 ಬದಲಾವಣೆಗಳನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಾಡಿಕೊಂಡಿತ್ತು. ಅಲ್ಲದೇ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ 350ಕ್ಕೂ ಅಧಿಕ ಎಐ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಇದರ 4.5 ಕೋಟಿ ರೂ. ವೆಚ್ಚವನ್ನು ಆರ್ ಸಿಬಿ ಭರಿಸಿತ್ತು.

ರಾಜ್ಯ ಗೃಹ ಇಲಾಖೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಈ ವಿಷಯವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆ ಮಾಧ್ಯಮ ಹೇಳಿಕೆ ಮೂಲದ ಪ್ರಕಟಿಸಿದೆ.

ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದ್ದರೂ ಪಂದ್ಯಗಳ ಸ್ಥಳ ಘೋಷಣೆ ಆಗಿಲ್ಲ. ಈ ಬಗ್ಗೆ ಘೋಷಣೆ ಮಾಡಲು ಐಪಿಎಲ್ ಆಡಳಿತ ಮಂಡಳಿಗೆ ಜನವರಿ 20ರೊಳಗೆ ಸರ್ಕಾರ ಅಂತಿಮ ನಿರ್ಧಾರ ತಿಳಿಸಬೇಕಿತ್ತು. ಇದೀಗ ರಾಜ್ಯ ಪೊಲೀಸ್ ಇಲಾಖೆ ವಿಧಿಸಿದ ಷರತ್ತುಗಳನ್ನು ಜಾರಿ ಮಾಡುವ ಭರವಸೆ ನೀಡಿರುವ ಕೆಎಸ್ ಸಿಎ ಪಂದ್ಯ ನಡೆಸಲು ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ಕಳೆದ ವರ್ಷ 18 ವರ್ಷಗಳ ನಂತರ ಆರ್ ಸಿಬಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments