ಮುಂಬರುವ ಮಂಡಲಂ ಮಕರವಿಲ್ಲಾಕು ವೇಳೆ ಭಕ್ತರಿಗೆ ಶಬರಿಮಲೆ ಅಯ್ಯಪ್ಪ ದೇವರ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ.
ಟ್ರಾವಂಕೂರ್ ದೇವಸೂಮ್ ಮಂಡಳಿ (ಟಿಡಿಬಿ) ಅಧ್ಯಕ್ಷ ಪಿಎಸ್ ಪ್ರಶಾಂತ್ ಪೂಜಾರಿಗಳನ್ನು ಸಂಪರ್ಕಿಸಿದ ನಂತರ ದರ್ಶನ ಅವಧಿಯನ್ನು 17 ಗಂಟೆಗೆ ವಿಸ್ತರಿಸಲಾಗಿದೆ. ಮಂಡಲಂ ಮಕರವಿಲ್ಲಾಕು ಅವಧಿಯಲ್ಲಿ ಮುಂಜಾನೆ 3 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಸಂಜೆ 3 ಗಂಟೆಯಿಂದ ತಡರಾತ್ರಿ 11 ಗಂಟೆಯವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ.
ಶಬರಿಮಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಪೂಜಾರಿಗಳು ದರ್ಶನ ಅವಧಿ ವಿಸ್ತರಿಸಲು ಸಹಮತ ವ್ಯಕ್ತಪಡಿಸಿದ್ದಾರೆ. ಇದರಿಂದ ಭಕ್ತರಿಗೆ ದರ್ಶನ ಸಾಲುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಈ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಸ್ಥಳದಲ್ಲೇ ಬುಕ್ಕಿಂಗ್ ತೆಗೆದು ವರ್ಷೂವಲ್ ಕ್ಯೂ ಏರ್ಪಡಿಸಿದ್ದಕ್ಕಾಗಿ ಹಲವು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷ ಅನಿರೀಕ್ಷಿತವಾಗಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. 20 ಸಾವಿರಕ್ಕೂ ಹೆಚ್ಚು ಭಕ್ತರು ಪ್ರತಿದಿನ ಸ್ಪಾಟ್ ಬುಕ್ಕಿಂಗ್ ಮಾಡುತ್ತಿದ್ದರು. ಈ ಗೊಂದಲದಿಂದ ಕಳೆದ ಬಾರಿ ಸೂಕ್ತ ವ್ಯವಸ್ಥೆ ಮಾಡಲಾಗದೇ ಸಮಸ್ಯೆ ಎದುರಾಗಿತ್ತು. ಈ ಬಾರಿ ಅವುಗಳಿಗೆ ಅವಕಾಶ ನೀಡದೇ ಇರಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಮಜಾಯಿಷಿ ನೀಡಿದರು.