Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ರಾಜ್ಯ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಎಸ್ಸೆಸ್ಸೆಲ್ಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
sslc exam
sslc exam

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕ ಪಡೆಯಲು ಶೇ.35 ಇದ್ದ ಮಿತಿಯಲ್ಲಿ 2 ಅಂಕ ಕಡಿಮೆ ಮಾಡಲಾಗಿದ್ದು, ಶೇ.33ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ಪಾಸಾಗಲಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು,  ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದರು.

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಅವರು ಹೇಳಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment