Tuesday, May 26, 2026
Google search engine
Homeರಾಜ್ಯಮಹಿಳೆಯರಿಗೆ ಸಿಹಿಸುದ್ದಿ: ಋತುಚಕ್ರದ ವೇಳೆ 1 ದಿನ ವೇತನ ಸಹಿತ ರಜೆಗೆ ಸಂಪುಟ ಅಸ್ತು

ಮಹಿಳೆಯರಿಗೆ ಸಿಹಿಸುದ್ದಿ: ಋತುಚಕ್ರದ ವೇಳೆ 1 ದಿನ ವೇತನ ಸಹಿತ ರಜೆಗೆ ಸಂಪುಟ ಅಸ್ತು

ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿರ ರಜೆ ನೀಡಲು  ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕ ಇಲಾಖೆ ಮಂಡಿಸಿದ್ದ ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಗ್ಯಾರಂಟಿ ಮೂಲಕ ಹೆಣ್ಣುಮಕ್ಕಳ ಮನಸು ಗೆದ್ದಿದ್ದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ದೀಪಾವಳಿ ಕೊಡುಗೆ ನೀಡಿದೆ.

ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಲಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ  ಒಂದು ದಿನ ರಜೆ ತೆಗೆದುಕೊಳ್ಳಬಹುದು ಎಂದರು.

ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಒಪ್ಪಿಗೆಯಾಗಿದ್ದು, ಆದಷ್ಟೂ ಬೇಗ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments