Monday, June 29, 2026
Google search engine
Homeಬೆಂಗಳೂರುಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ.

ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಡಿಸೆಂಬರ್ 19ರಂದು ರಾಜ್ಯ ಸರ್ಕಾರ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಮಾರ್ಗಸೂಚಿ ಹೊರಡಿಸಿ ಮೀಸಲಾತಿ ಪಟ್ಟಿ ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್‌ನ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳಾ ಮೀಸಲಾತಿ ಒಳಗೊಂಡ ಕರಡು ಪಟ್ಟಿ ಸಿದ್ಧಗೊಂಡಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಜ.12ರ ಸೋಮವಾರ ವಿಚಾರಣೆ ನಡೆಯಲಿದೆ. ವಾರ್ಡ್‌ಗಳಿಗೆ ನಿಗದಿಪಡಿಸಿರುವ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ಸಲ್ಲಿಸುವ ಅಗತ್ಯವಿರುವುದರಿಂದ ರಾಜ್ಯ ಸರ್ಕಾರವು ಕರಡು ಅಧಿಸೂಚನೆ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ವಾರ್ಡ್ ವಾರು ಕರಡು ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ಒಟ್ಟು ವಾರ್ಡ್‌ಗಳ ಶೇ.50 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಸಾಮಾನ್ಯ ವರ್ಗಗಳಲ್ಲಿಯೂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ಪ್ರಕಟಿಸಿರುವ ಈ ಕರಡು ಮೀಸಲಾತಿ ಪಟ್ಟಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆಗಳ ಪರಿಗಣಿಸಿದ ಬಳಿಕ ಅಂತಿಮವಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments