Saturday, October 24, 2026
Google search engine
Homeಅಪರಾಧಸಾಲ ಕೊಡದ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಸಾಲ ಕೊಡದ ಕಿರಾಣಿ ಅಂಗಡಿ ಮಾಲೀಕನ ಕೊಲೆ

ರಾಯಚೂರು: ಕಿರಾಣಿ ಅಂಗಡಿಯಲ್ಲಿ ಉದ್ರಿ ನೀಡಲು ನಿರಾಕರಿಸಿದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಎಲ್.ಬಿ.ಎಸ್. ನಗರ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಕಿರಾಣಿ ಅಂಗಡಿ ಮಾಲೀಕ ನರಸಿಂಹ (40) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಎಲ್.ಬಿ.ಎಸ್. ನಗರ ಬಡಾವಣೆಯಲ್ಲಿರುವ ನರಸಿಂಹ ಅವರ ಕಿರಾಣಿ ಅಂಗಡಿಗೆ ಬಂದಿದ್ದ ಕೆಲ ಯುವಕರು ಉದ್ರಿಯಾಗಿ ಸಾಮಗ್ರಿ ನೀಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಆದರೆ ನರಸಿಂಹ ಅವರು ಉದ್ರಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕರು ಅವರೊಂದಿಗೆ ಗಲಾಟೆ ನಡೆಸಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನರಸಿಂಹ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಯುವಕರ ಗುರುತು ಹಾಗೂ ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಸಣ್ಣ ವಿಚಾರವಾಗಿ ಆರಂಭವಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವುದು ಬಡಾವಣೆಯ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments